alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯ ಹೋರಾಟಗಾರನ ‘ಕ್ಷಮೆ’ ಕೋರಿದ ನ್ಯಾಯಾಲಯ

ದೇಶಾದ್ಯಂತ ಇಂದು 69 ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದೇಶಿ ಗಣ್ಯರೂ ಅತಿಥಿಗಳಾಗಿ ಪಾಲ್ಗೊಂಡಿದ್ದಾರೆ.

ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ಕಡೆಗಣಿಸುತ್ತಿರುವ ಹಲವು ಪ್ರಕರಣಗಳು ಮಾಧ್ಯಮಗಳಲ್ಲಿ ಈ ಹಿಂದೆ ವರದಿಯಾಗಿದ್ದವು. ಇದಕ್ಕೆ ಈಗ ಮತ್ತೊಂದು ಪ್ರಕರಣ ಸೇರ್ಪಡೆಗೊಂಡಿದ್ದು, ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಸ್ವತಃ ಹೈಕೋರ್ಟ್ ನ್ಯಾಯಾಧೀಶರೇ ಸ್ವಾತಂತ್ರ್ಯ ಯೋಧನ ಕ್ಷಮೆ ಯಾಚಿಸಿದ ಘಟನೆ ನಡೆದಿದೆ.

89 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ. ಗಾಂಧಿ ಎಂಬವರು 1980 ರಲ್ಲಿ ಮಾಸಾಶನ ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ ರೇಷನ್ ಕಾರ್ಡ್ ಹಾಗೂ ಓಟರ್ ಐಡಿಗಳಲ್ಲಿ ವಯಸ್ಸಿನ ವ್ಯತ್ಯಾಸವಿದೆ ಎಂದು ಕುಂಟು ನೆಪ ಹೇಳಿದ್ದ ಅಧಿಕಾರಿಗಳು ಇವರ ಅರ್ಜಿಯನ್ನು ತಿರಸ್ಕರಿಸುತ್ತಲೇ ಬಂದಿದ್ದರು. ಗಾಂಧಿಯವರ ಬಳಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುರಿತು ಐಎನ್ಎ ನ ಕ್ಯಾಪ್ಟನ್ ಲಕ್ಷ್ಮೀ ಸೆಹಗಲ್ ಅವರೇ ನೀಡಿದ ಪ್ರಶಂಸಾ ಪತ್ರವಿದ್ದರೂ ಅಧಿಕಾರಿಗಳು ಅದನ್ನು ಪರಿಗಣಿಸಿರಲಿಲ್ಲ.

ಗಾಂಧಿ ಈ ಕುರಿತು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಗಣರಾಜ್ಯೋತ್ಸವ ಮುನ್ನಾ ದಿನ ಈ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾಯಾಧೀಶ ಕೆ. ರವಿಚಂದ್ರ ಬಾಬು, ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಕಿಡಿ ಕಾರಿದರಲ್ಲದೇ ಗಾಂಧಿಯವರಿಗಾದ ತೊಂದರೆಗೆ ಕ್ಷಮೆ ಕೋರಿದ್ದಾರೆ. ಅಲ್ಲದೇ ಅಂದು ಬ್ರಿಟಿಷರ ವಿರುದ್ದ ಹೋರಾಟ ನಡೆಸಿದ್ದ ನಿಮಗೆ ನಮ್ಮವರೇ(ಅಧಿಕಾರಿಗಳು) ಈಗ ತೊಂದರೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಕ್ಯಾಪ್ಟನ್ ಲಕ್ಷ್ಮೀ ಸೆಹಗಲ್ ಅವರು ನೀಡಿದ ಪ್ರಶಂಸಾ ಪತ್ರಕ್ಕಿಂತ ಮತ್ತಿನ್ಯಾವ ದಾಖಲೆ ಬೇಕು ಎಂದು ಅಧಿಕಾರಿ ವರ್ಗವನ್ನು ಪ್ರಶ್ನಿಸಿದ ನ್ಯಾಯಾಧೀಶರು, ಕೂಡಲೇ ಗಾಂಧಿಯವರಿಗೆ ಮಾಸಾಶನ ಮಂಜೂರು ಮಾಡುವಂತೆ ಆದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...