alex Certify
ಕನ್ನಡ ದುನಿಯಾ       Mobile App
       

Kannada Duniya

ಕರಣಿ ಸೇನೆಯ ಗೂಂಡಾಗಳನ್ನೇಕೆ ಜೀಪಿಗೆ ಕಟ್ಟಬಾರದೆಂದ ಒಮರ್ ಅಬ್ದುಲ್ಲಾ

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಶಾಹಿದ್ ಕಪೂರ್ ಅಭಿನಯದ ಚಿತ್ರ ‘ಪದ್ಮಾವತ್’ ಬಿಡುಗಡೆಗೆ ವಿರೋಧಿಸಿ ಗುರುಗ್ರಾಮ್ ನಲ್ಲಿ ಕೆಲವರು ಶಾಲಾ ಮಕ್ಕಳಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕರಣಿ ಸೇನೆಯ ಕಾರ್ಯಕರ್ತರ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಬಸ್ ನಲ್ಲಿ ಪುಟ್ಟ ಮಕ್ಕಳಿದ್ದರೂ ಅಮಾನವೀಯವಾಗಿ ನಡೆದುಕೊಂಡಿದ್ದಾರೆಂದು ಟೀಕಿಸಲಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯ ಮಂತ್ರಿ ಒಮರ್ ಅಬ್ದುಲ್ಲಾ, ಕರಣಿ ಸೇನೆಯ ಗೂಂಡಾಗಳನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಬಾರದೇಕೆ ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಶ್ರೀನಗರದಲ್ಲಿ ಭಾರತೀಯ ಯೋಧರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬನನ್ನು ಸೇನಾ ಜೀಪ್ ಗೆ ಕಟ್ಟಿ ಮಾನವ ಗುರಾಣಿಯನ್ನಾಗಿ ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಒಮರ್ ಅಬ್ದುಲ್ಲಾ ಈ ಟ್ವೀಟ್ ಮಾಡಿದ್ದಾರೆಂದು ವಿಶ್ಲೇಷಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...