alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಖರೀದಿಸುವವರಿಗೆ ಕಡಿಮೆಯಾಗುತ್ತಾ GST ಹೊರೆ…?

ನೋಟು ನಿಷೇಧದ ನಂತರ ಭೂಮಿ ಬೆಲೆ ಇಳಿಕೆಯಾಗಿದೆ ಅನ್ನೋದು ರಿಯಲ್ ಎಸ್ಟೇಟ್ ಉದ್ಯಮಿಗಳ ಅಳಲು. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಜಿಎಸ್ಟಿ ಶಾಕ್ ಕೊಟ್ಟಿತ್ತು. ಸದ್ಯ ಮನೆ ಖರೀದಿ ಮಾಡುವವರು ಶೇ.12 ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕು.

ಇದನ್ನು ಇಳಿಕೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ನ್ಯಾಶನಲ್ ಹೌಸಿಂಗ್ ಬ್ಯಾಂಕ್ ಈ ಬಗ್ಗೆ ಸರ್ಕಾರದ ಜೊತೆಗೆ ಮಾತುಕತೆ ನಡೆಸ್ತಿದೆ. ಕೈಗೆಟುಕುವ ವಸತಿ ವಿಭಾಗದ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡುವ ಸಾಧ್ಯತೆ ಕೂಡ ಇದೆ.

ಜಿಎಸ್ಟಿ ದರದಲ್ಲಿ ಬದಲಾವಣೆ ಮಾಡುವಂತೆ ಮನವಿ ಮಾಡಲು ಇತ್ತೀಚೆಗಷ್ಟೆ ರಿಯಾಲ್ಟಿ ಡೆವಲಪರ್ಗಳು ಕೂಡ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದರು. ಸದ್ಯ ನಿರ್ಮಾಣ ಹಂತದಲ್ಲಿರುವ ಪ್ರಾಪರ್ಟಿಗಳ ಮೇಲೆ ಶೇ.18ರಷ್ಟು ಜಿಎಸ್ಟಿ ವಿಧಿಸಲಾಗಿದೆ. ಇದನ್ನು ಕೂಡ ಶೇ.12ಕ್ಕೆ ಇಳಿಸಬೇಕು ಅನ್ನೋದು ಬಿಲ್ಡರ್ ಗಳ ಒತ್ತಾಯ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...