alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಸತ್ ಅಧಿವೇಶನದಲ್ಲಿ ಸರ್ಕಾರಕ್ಕೆ ವಿಪಕ್ಷಗಳ ಚಾಟಿ

parliament

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 500 ಹಾಗೂ 1000 ರೂ. ಮುಖಬೆಲೆ ನೋಟುಗಳನ್ನು ಏಕಾಏಕಿ ರದ್ದುಪಡಿಸಿರುವುದರಿಂದ, ಜನಸಾಮಾನ್ಯರಿಗೆ ಆಗಿರುವ ತೊಂದರೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಸೈನಿಕರ ಫೈರಿಂಗ್, ಉಗ್ರರ ದಾಳಿ, ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ, ನೋಟುಗಳ ರದ್ದು ಮೊದಲಾದ ವಿಷಯಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಕಾಂಗ್ರೆಸ್, ಸಿ.ಪಿ.ಐ, ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಈಗಾಗಲೇ ಚರ್ಚೆ ನಡೆಸಿವೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಈಗಾಗಲೇ ಸಭೆ ನಡೆಸಿ ಚರ್ಚಿಸಿವೆ.

ಸರ್ಕಾರ ಕೂಡ ವಿಪಕ್ಷಗಳನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಎನ್.ಡಿ.ಎ. ಸಭೆ ಹಾಗೂ ಬಿ.ಜೆ.ಪಿ. ಸಂಸದೀಯ ಸಭೆಯಲ್ಲಿ ಅಗತ್ಯ ಚರ್ಚೆ ನಡೆಸಿದ್ದು, ಎಲ್ಲಾ ವಿಚಾರಗಳಿಗೆ ಸಮರ್ಥ ಉತ್ತರ ನೀಡಲು ಸಜ್ಜಾಗಿದೆ. 1 ತಿಂಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...