alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಕ್ಯೂನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

akhilesh-yadav_650x400_81482578435

ಮುಂದಿನ ವಾರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಿಎಂ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರದ ವಿರುದ್ಧ ಹೋರಾಟ ಶುರು ಮಾಡಿದ್ದಾರೆ. ನೋಟು ನಿಷೇಧದ ಬಳಿಕ ಬ್ಯಾಂಕ್ ಕ್ಯೂನಲ್ಲಿ ನಿಂತು ಮೃತಪಟ್ಟ 14 ಜನರ ಕುಟುಂಬಗಳಿಗೆ ಅಖಿಲೇಶ್ ತಲಾ 2 ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದಾರೆ.

ಇದರಲ್ಲಿ ಯಾವುದೇ ರೀತಿಯ ರಾಜಕೀಯವಿಲ್ಲ ಅಂತಾ ಸಮರ್ಥಿಸಿಕೊಂಡಿದ್ದಾರೆ. ಆರಂಭದಲ್ಲಿ ಎಲ್ರೂ ನೋಟು ನಿಷೇಧ ನಿರ್ಧಾರವನ್ನು ಕೊಂಡಾಡಿದ್ರು, ಆದ್ರೆ ಈಗ ಜನರಿಗೆ ಸತ್ಯದ ಅರಿವಾಗಿದೆ. ನೋಟು ನಿಷೇಧದಿಂದ ಬವಣೆ ಅನುಭವಿಸಿದ ಮತದಾರರು ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಅಂತಾ ಅಖಿಲೇಶ್ ಭವಿಷ್ಯ ನುಡಿದಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಕೂಡ ಉತ್ತರಪ್ರದೇಶದಲ್ಲಿ ಪರಿವರ್ತನ ಯಾತ್ರಾ ಹಮ್ಮಿಕೊಂಡಿತ್ತು. ಇವತ್ತು ಅಭಿಯಾನ ಮುಕ್ತಾಯವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...