alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರ್ದೆಸೆಗೆ ಹೋದಾಗಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕೊರಾಪುಟ್(ಒಡಿಶಾ): ಕೆಲವು ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಅನೇಕ ಘಟನೆಗಳು ನಡೆದಿವೆ. ಅಂತಹುದೇ ಘಟನೆಯೊಂದು ಒಡಿಶಾದ ಕೊರಾಪುಟ್ ನಲ್ಲಿ ನಡೆದಿದೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಬುಡಕಟ್ಟು ಸಮುದಾಯದ ಗರ್ಭಿಣಿಗೆ, ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡದ ಕಾರಣ, ಆಸ್ಪತ್ರೆ ಆವರಣದಲ್ಲಿರುವ ಚರಂಡಿಯಲ್ಲೇ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

ಶಾಹಿದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಡಾಸ್ಮಂತ್ ಪುರ ಬ್ಲಾಕ್ ನ ಜನಿಗುಡಾ ಗ್ರಾಮದ 30 ವರ್ಷದ ಗರ್ಭಿಣಿ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪತಿ ರಘು ಮುದಲಿಯನ್ನು ನೋಡಲು ಬಂದಿದ್ದಾರೆ.

ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ, ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಇದರಿಂದ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿ ಚರಂಡಿಯಲ್ಲೇ ಜನ್ಮ ನೀಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಹೇಳಿದ್ದಾರೆ.

ಆದರೆ, ಆಸ್ಪತ್ರೆಯ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದಾರೆ. ಮಹಿಳೆಗೆ ಚಿಕಿತ್ಸೆ ನೀಡಲು ನಾವು ಸಿದ್ದವಿದ್ದೆವು. ಅವರು ವೈದ್ಯಕೀಯ ಪರೀಕ್ಷೆಗಾಗಿ, ದಾಖಲಾಗುವ ಕುರಿತಾಗಿ ನಮ್ಮನ್ನು ಸಂಪರ್ಕಿಸಿಲ್ಲ. ಪ್ರಕೃತಿ ಕರೆಗೆಂದು ಚರಂಡಿ ಬಳಿ ಹೋದಾಗ ಅವರಿಗೆ ಹೆರಿಗೆಯಾಗಿದೆ. ಬಳಿಕ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...