alex Certify
ಕನ್ನಡ ದುನಿಯಾ       Mobile App
       

Kannada Duniya

ಸಾರ್ವಜನಿಕ ಪ್ರದೇಶದಲ್ಲಿ ನಡೀತು ತಲೆ ತಗ್ಗಿಸುವ ಘಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕವಾಗಿ ಮಹಿಳೆ ಹಾಗೂ ಆಕೆ ಪತಿ ಮೇಲೆ ಹಲ್ಲೆ ನಡೆಸಲಾಗಿದೆ. ಇದ್ರ ವಿಡಿಯೋ ವೈರಲ್ ಆಗಿದೆ. ಘಟನೆ ಸೆಪ್ಟೆಂಬರ್ 3 ರಂದು ನಡೆದಿದ್ದು, ವಿಡಿಯೋ ವೈರಲ್ ಆದ್ಮೇಲೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಮಾರುಕಟ್ಟೆಗೆ ಬರ್ತಿದ್ದ ಮಹಿಳೆಗೆ ಇಬ್ಬರು ಕಿರುಕುಳ ನೀಡಲು ಶುರುಮಾಡಿದ್ದಾರೆ. ಇದಕ್ಕೆ ಮಹಿಳೆ ಪತಿ ವಿರೋಧ ಮಾಡ್ತಿದ್ದಂತೆ ಆರೋಪಿಗಳು ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ತಪ್ಪಿಸಲು ಬಂದ ಮಹಿಳೆಗೂ ಒದೆ ನೀಡಿದ್ದಾರೆ. ಎರಡು ಕುಟುಂಬಳ ಹಳೆ ದ್ವೇಷ ಇದಕ್ಕೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ನಿಜಾಮುದ್ದೀನ್ ಪೊಲೀಸ್ ಠಾಣೆ ಬಳಿ ನಡೆದಿದೆ. ಪೊಲೀಸ್ ಠಾಣೆ ಬಳಿ ಸಾರ್ವಜನಿಕ ಪ್ರದೇಶದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಯುತ್ತಿದ್ರೂ ಪೊಲೀಸರಿಗೆ ವಿಷ್ಯ ಗೊತ್ತಾಗಲಿಲ್ಲ. ಇದು ಸುರಕ್ಷತೆಗೆ ಸವಾಲಾಗಿದೆ. ವಿಡಿಯೋ ವೈರಲ್ ಆದ್ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...