alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆ ಬೆಡ್ ಮೇಲಿಂದ ಬಿದ್ದು ಮಹಿಳೆ ಸಾವು

ಆಂಧ್ರದ ವಿಜಯವಾಡದ ಹಳೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಬೆಡ್ ಮೇಲಿಂದ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ ಅಂತ ಹೇಳಲಾಗ್ತಿದೆ. ನಾಲ್ಕು ಮಂದಿ ಮಹಿಳೆಯರಿಗೆ ಒಂದೇ ಒಂದು ಬೆಡ್ ನೀಡಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಸ್ವಾತಿ ಎಂಬುವವರೇ ಸಾವನ್ನಪ್ಪಿರುವ ಮಹಿಳೆ. ಆಸ್ಪತ್ರೆಯಲ್ಲಿ ಹೆರಿಗೆ ವಾರ್ಡ್ಗಳಲ್ಲಿ ಹಾಸಿಗೆಗಳ ಕೊರತೆ ಇದ್ದ ಕಾರಣ ನಾಲ್ವರು ಮಹಿಳೆಯರಿಗೆ ಒಂದೇ ಬೆಡ್ ನೀಡಲಾಗಿತ್ತು. ಸೋಮವಾರ ಬೆಳಗಿನ ವೇಳೆಯಲ್ಲಿ ಸ್ವಾತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದ್ರೆ ಅವರು ಮಂಗಳವಾರ ಬೆಳಗಿನ ವೇಳೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವೇಳೆ ಅವರು ತಮ್ಮ ಸಂಬಂಧಿಕರಿಗೆ ತಮ್ಮ ಜೊತೆ ಇರುವಂತೆ ಹೇಳಿ ಅಂತ ಆಸ್ಪತ್ರೆ ಸಿಬ್ಬಂದಿಗೆ ತಿಳಿಸಿದ್ದರು. ಆದ್ರೆ ಜಾಗದ ಕೊರತೆ ಇದ್ದ ಕಾರಣ ಸಿಬ್ಬಂದಿ ಸ್ವಾತಿ ಕೋರಿಕೆಗೆ ಸ್ಪಂದಿಸಲಿಲ್ಲ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಸಿಗೆಯಿಂದ ಬಿದ್ದ ಆಕೆ ಮೂಗು ಬಾಯಿಯಲ್ಲಿ ತೀವ್ರ ರಕ್ತಸ್ರಾವ ಉಂಟಾಯ್ತು. ಆನಂತರದಲ್ಲಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ರು. ಸ್ವಾತಿ ಸಾವಿನಿಂದ ಕೋಪಗೊಂಡ ಸಂಬಂಧಿಕರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಗೆ ಆದೇಶ ನೀಡಿದ್ದಾರೆ. ಸ್ವಾತಿ ವಿಚಾರದಲ್ಲಿ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಕಾಳಜಿ ವಹಿಸದೆ ಇರೋದೆ ಸಾವು ಸಂಭವಿಸೋದಕ್ಕೆ ಕಾರಣ ಅಂತ ಹೇಳಲಾಗ್ತಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೂಡ ಪ್ರಕರಣದ ಬಗ್ಗೆ ಮಾಹಿತಿಯನ್ನ ಪಡೆದಿದ್ದಾರೆ. ಮಹಿಳೆಯ ಸಾವಿನಿಂದ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ಗಳ ಸಂಖ್ಯೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಗುವಿನ ಪಾಲನೆಗೆ 6 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...