alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಕರನಿಗೆ ಮದುವೆ ಫಿಕ್ಸ್, ಮಹಿಳೆ ಮಾಡಿದ್ದೇನು..?

kerala nm

ಮಥುರಾ: ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವಾಂತರ ಸೃಷ್ಠಿಸಿದ ಘಟನೆ ಮಥುರಾದಲ್ಲಿ ನಡೆದಿದೆ. ದೆಹಲಿಗೆ ಹೊರಟಿದ್ದ ಕೇರಳ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ರೈಲು ಮಥುರಾ ಸಮೀಪ ಹೋಗುತ್ತಿದ್ದ ಸಂದರ್ಭದಲ್ಲಿ ದಾಬ್ರಾ ಪೊಲೀಸ್ ಅಧೀಕ್ಷಕರಿಗೆ ಫೋನ್ ಮಾಡಿದ ಮಹಿಳೆ, ತಾನು ಪ್ರೀತಿಸುತ್ತಿದ್ದ ಯುವಕ ಬೇರೆ ಯುವತಿ ಜೊತೆಗೆ ಮದುವೆ ನಿಶ್ಚಯ ಮಾಡಿಕೊಂಡಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾಳೆ. ಕೂಡಲೇ ಪೊಲೀಸ್ ಅಧೀಕ್ಷಕರು, ರೈಲ್ವೇ ರಕ್ಷಣಾ ಪಡೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಮಥುರಾ ರೈಲು ನಿಲ್ದಾಣದಲ್ಲಿ ನಿಂತ ರೈಲಿನ ತಪಾಸಣೆ ಮಾಡಿದ್ದು, ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆ ಪ್ರಜ್ಞೆ ತಪ್ಪಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಕೆ ಭೋಪಾಲ್ ನಿವಾಸಿಯಾಗಿದ್ದು, ಪ್ರಿಯಕರನ ವಿರುದ್ಧ ರೇಪ್, ವಂಚನೆ ಕೇಸ್ ದಾಖಲಿಸಿದ್ದಾಳೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...