alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿ ಮಹಿಳೆಗೆ ಪ್ರವೇಶ ನಿರಾಕರಿಸಿದ ಸರ್ಕಾರಿ ಆಸ್ಪತ್ರೆ, ರಸ್ತೆಯಲ್ಲೇ ಆಯ್ತು ಹೆರಿಗೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣ ದಾಖಲಾಗಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಗರ್ಭಿಣಿ ಸ್ತ್ರೀಯೊಬ್ಬರನ್ನ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ ಕಾರಣ ರಸ್ತೆಯಲ್ಲೇ ಆ ಮಹಿಳೆಗೆ ಹೆರಿಗೆಯಾಗಿದೆ. 26 ವರ್ಷದ ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಉತ್ತರ ಪ್ರದೇಶದ ಬುದಾನಾ ನಗರದಲ್ಲಿ ಈ ಘಟನೆ ನಡೆದಿದೆ. ಯೂಸುಫ್ ಎಂಬುವವರು ತನ್ನ ಪತ್ನಿ ಫರ್ಜಾನಾರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬುದಾನಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದ್ರೆ ಆಸ್ಪತ್ರೆಯ ಸಿಬ್ಬಂದಿ ಯೂಸುಫ್ ರ ಪತ್ನಿಯನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ. ಫರ್ಜಾನಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಅವರನ್ನ ಜಿಲ್ಲಾಸ್ಪತ್ರೆಗೆ ತೆರಳುವಂತೆ ಹೇಳಿದ್ರಂತೆ ಆಸ್ಪತ್ರೆಯ ಸಿಬ್ಬಂದಿ. ಇಷ್ಟೆಲ್ಲಾ ನಡೆಯೋ ವೇಳೆಯಲ್ಲೇ ಫರ್ಜಾನಾ ರಸ್ತೆ ಬದಿಯಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಯೂಸುಫ್ ಪೊಲೀಸರಿಗೆ ದೂರು ನೀಡಿದ ನಂತರವೂ ಆಸ್ಪತ್ರೆಯ ಸಿಬ್ಬಂದಿ ಆಕೆಯನ್ನ ದಾಖಲು ಮಾಡಿಕೊಳ್ಳೋಕೆ ಒಪ್ಪಲಿಲ್ಲ. ಜಿಲ್ಲಾಸ್ಪತ್ರೆಗೆ ತೆರಳುವಂತೆ ಹೇಳಿದ್ರು. ಈ ಸಂಬಂಧ ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆಯನ್ನ ನಡೆಸಿದ್ದಾರೆ. ಪ್ರಕರಣವನ್ನ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...