alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

baby_22_1494575780_749x421

ಹರ್ಯಾಣ ಜಿಂದ್ ಜಿಲ್ಲೆಯ ಧಮ್ತನ್ ನಲ್ಲಿ ಮಹಿಳೆ ಕವಿತಾ ಆಟೋದಲ್ಲಿ ಮಗವಿಗೆ ಜನ್ಮ ನೀಡಿದ್ದಾಳೆ. ಇದಾದ ನಂತ್ರ ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಆರೋಗ್ಯವಾಗಿದೆಯೆಂದು ವೈದ್ಯರು ತಿಳಿಸಿದ್ದಾರೆ.

ಕವಿತಾ ಪತಿ ಕುಲ್ಬೀರ್ ಭೇಟಿ ಬಚಾವೋ ಯೋಜನೆ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಭೇಟಿ ಬಚಾವೋ ಯೋಜನೆಯನ್ನು ಪ್ರತಿಪಾದಿಸ್ತಿದೆ. ಆದ್ರೆ ಆಸ್ಪತ್ರೆಗಳಲ್ಲಿ ಯಾವುದೇ ಸೌಲಭ್ಯವಿಲ್ಲ ಎಂದು ಕುಲ್ಬೀರ್ ಆರೋಪ ಮಾಡಿದ್ದಾರೆ. ಧಮ್ತನ್ ನಲ್ಲಿ ಒಂದು ಆಸ್ಪತ್ರೆಯೇನೋ ಇದೆ. ಆದ್ರೆ ಅಲ್ಲಿ ಯಾವುದೇ ಸೌಲಭ್ಯವಿಲ್ಲ. ಜೊತೆಗೆ ವೈದ್ಯರು ಇರೋದಿಲ್ಲ. ಇದ್ರಿಂದಾಗಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗ್ತಾ ಇದೆ. ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕವಿತಾ ಪತಿ ದೂರಿದ್ದಾರೆ.

ಆಟೋದಲ್ಲಿ ಮಗು ಜನನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿಗೆ ತನಿಖೆ ನಡೆಯಲಿದೆ ಎಂದು ಹಿರಿಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಹಾಗೆ ಆಸ್ಪತ್ರೆಯಲ್ಲಿ ವೈದ್ಯರ ಜೊತೆ ಎಲ್ಲ ಸೌಲಭ್ಯ ಸಿಗುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...