alex Certify
ಕನ್ನಡ ದುನಿಯಾ       Mobile App
       

Kannada Duniya

ಚಾರ್ಮಿನಾರ್ ಬಳಿ ಡ್ರೋನ್ ಹಾರಿಸಿದ್ದ ಯುವತಿ ಅರೆಸ್ಟ್

ಚಾರ್ಮಿನಾರ್ ಸುತ್ತ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ಒಬ್ಬ ಯುವತಿಯನ್ನು ಹೈದರಾಬಾದ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾರ್ಮಿನಾರ್ ಪ್ರಾಂತ್ಯದಲ್ಲಿ ಡ್ರೋನ್ ಕ್ಯಾಮೆರಾ ಹಾರಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಯುವತಿ ಹಾಗೂ ಡ್ರೋನ್ ಕ್ಯಾಮೆರಾವನ್ನು ವಶಕ್ಕೆ ಪಡೆದಿದ್ದಾರೆ.

ಚಾರ್ಮಿನಾರ್ ಪೊಲೀಸ್ ಠಾಣೆಯ ಅಧಿಕಾರಿ ಈ ಕುರಿತು ಮಾಹಿತಿ ನೀಡಿದ್ದು, ಗುರುವಾರ ರಾತ್ರಿ 26 ವರ್ಷದ ಯುವತಿ ಡ್ರೋನ್ ಕ್ಯಾಮೆರಾ ಬಳಸುತ್ತಿರುವುದು ತಿಳಿದುಬಂತು. ಅದರಂತೆ ನಾವು ಅವಳ ವಿಚಾರಣೆ ನಡೆಸಿದ್ದೇವೆ. ಅಲ್ಲದೆ ಐಪಿಸಿ ಸೆಕ್ಷನ್ 188 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾಗಿ ತಿಳಿಸಿದ್ದಾರೆ.

ಹೈದರಾಬಾದ್ ಪೊಲೀಸರು ಒಂದು ತಿಂಗಳು ಡ್ರೋನ್ ಕ್ಯಾಮೆರಾ ಬಳಕೆ ನಿಷೇಧ ಹೇರಿದ್ದರು. ಗುಪ್ತಚರ ಸಂಸ್ಥೆ ಉಗ್ರರ ದಾಳಿ ನಡೆಯುವ ಕುರಿತು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಡ್ರೋನ್ ಬಳಕೆ ಮಾಡದಂತೆ ನಿರ್ಬಂಧ ವಿಧಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...