alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಪಿ ಪಾಕ್ ದಾಳಿಗೆ ಬಲಿಯಾದ ಮಹಿಳೆ

Army troops taking positions during an encounter in Tral area of south Kashmir on Wednesday in which three militants, reportedly belonging to Zakir Musa group of “Al-Qaeda” were killed. PHOTO BY BILAL BAHADUR

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂದಾರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಪೂಂಚ್ ವಲಯದಲ್ಲಿ ಬೆಳಗಿನ ಜಾವ ಪಾಕ್ ನಿಂದ ಅಪ್ರಚೋದಿತವಾಗಿ ಗುಂಡಿನ ಹಾಗೂ ಶೆಲ್ ದಾಳಿ ನಡೆಸಲಾಗಿದೆ. ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನೇ ನೀಡಿದೆ.

ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕ್ ನಡೆಸಿದ ದಾಳಿಯಲ್ಲಿ 45 ವರ್ಷದ ಮಹಿಳೆ ಸಾವು ಕಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಂಚಿನಲ್ಲಿರುವ ಈ ಪ್ರದೇಶದಲ್ಲಿ ಭಾರತ ಮತ್ತು ಪಾಕ್ ಸೈನಿಕರ ನಡುವೆ ಹಲವು ಸಲ ಗುಂಡಿನ ಚಕಮಕಿ ನಡೆದಿದೆ. ಬೇಸಿಗೆಯಲ್ಲಿ ನಡೆದ ಫೈರಿಂಗ್ ನಲ್ಲಿ ಹಲವು ಸೈನಿಕರು, ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಪಾಕ್ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಈ ವರ್ಷ ಎಲ್.ಒ.ಸಿ.ಯಲ್ಲಿ 301 ಸಲ ಪಾಕ್ ಕದನ ವಿರಾಮ ಉಲ್ಲಂಘಿಸಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...