alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣೆದುರೇ ನಡೆದ ಕೃತ್ಯ ಕಂಡು ಬೆಚ್ಚಿ ಬಿದ್ರು ಸಾರ್ವಜನಿಕರು

ಮಹಾರಾಷ್ಟ್ರದ ಥಾಣೆಯಲ್ಲಿ ಹಾಡಹಗಲೇ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಬರ್ಬರ ಕೃತ್ಯವೊಂದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯನ್ನು ಅಪರಿಚಿತನೊಬ್ಬ ಮನಬಂದಂತೆ ಇರಿದು ಹತ್ಯೆಗೈದಿದ್ದಾನೆ.

ಇಂದು ಬೆಳಗ್ಗೆ 10.30 ರ ಸುಮಾರಿಗೆ ಜನನಿಬಿಡ ಪ್ರದೇಶವಾದ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ಈ ಘಟನೆ ನಡೆದಿದ್ದು, 21 ವರ್ಷದ ಪ್ರಾಚಿ ಎಂಬಾಕೆ ಹತ್ಯೆಯಾದ ಯುವತಿಯಾಗಿದ್ದಾಳೆ.

ಪ್ರಾಚಿ, ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಆಕೆಯನ್ನು ಅಡ್ಡಗಟ್ಟಿದ ಅಪರಿಚಿತ ದುಷ್ಕರ್ಮಿ ಚಾಕುವಿನಿಂದ ಮನಬಂದಂತೆ ಇರಿದು ಬಳಿಕ ಪರಾರಿಯಾಗಿದ್ದಾನೆ. ಕಣ್ಣೆದುರೇ ನಡೆದ ಘಟನೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದರಾದರೂ ಅಷ್ಟರಲ್ಲಾಗಲೇ ತೀವ್ರ ರಕ್ತಸ್ರಾವದಿಂದ ಯುವತಿ ಮೃತಪಟ್ಟಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಂತಕನ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...