alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಎಂ ಭೇಟಿಗೆ ಅವಕಾಶ ಸಿಗಲಿಲ್ಲವೆಂದು ಬಸ್‌ಗೆ ಬೆಂಕಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ವಾರಣಾಸಿಯಲ್ಲಿ ಸರಕಾರಿ ಬಸ್ಸಿಗೆ ಮಹಿಳೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಇತ್ತೀಚಿಗೆ ಮೋದಿ ಅವರು ವಾರಣಾಸಿಗೆ ಭೇಟಿ ನೀಡಿದ ವೇಳೆ, ಪೂರ್ವಾಂಚಲ್‌ವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ಹೋರಾಟ ನಡೆಸುತ್ತಿರುವ ವಂದನಾ ರಘುವಂಶಿ ಎನ್ನುವ ಮಹಿಳೆ ಭೇಟಿಯಾಗಲು ಬಯಸಿದ್ದರು.

ಆದರೆ ಸುರಕ್ಷತೆಯ ದೃಷ್ಟಿಯಿಂದ ಈ ಬೇಡಿಕೆಗೆ ರಾಜ್ಯ ಪೊಲೀಸರು ಸಮ್ಮತಿಸಿರಲಿಲ್ಲ. ಪೂರ್ವಾಂಚಲ್ ಜನ್ ಆಂದೋಲನ ಸಮಿತಿಯ ಕಾರ್ಯದರ್ಶಿಯಾಗಿರುವ ವಂದನಾ, ಇದರಿಂದ ಕುಪಿತಗೊಂಡು ಸರಕಾರಿ ಬಸ್‌ಗೆ ಬೆಂಕಿ ಹಚ್ಚಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾರಣಾಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಮಹಿಳೆ, ವೋಲ್ವೋ ಬಸ್ ಏರಿದ್ದಾಳೆ. ಆಕೆಯೊಂದಿಗೆ ಬಸ್ ಏರಿದ ಇಬ್ಬರನ್ನು ಕೆಳಗಿಳಿಸಿ, ಬಸ್‌ನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ ಎಂದು ವಾರಣಾಸಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆ ಇಂದ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿದರೂ, ಬೆಂಕಿ ನಂದಿಸುವ ವೇಳೆ ಬಸ್ ಭಾಗಶಃ ಸುಟ್ಟು ಕರಕಲಾಗಿತ್ತು ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...