alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ರೈಲಿನಲ್ಲಿ ಪ್ರಪಂಚ ನೋಡಿದ ಅವಳಿ ಮಕ್ಕಳು

ಮುಂಬೈ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ನಲ್ಲಿ ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಭಾನುವಾರ ಬೆಳಿಗ್ಗೆ 7.52 ರ ಸುಮಾರಿಗೆ ಅವಳಿ ಮಕ್ಕಳಿಗೆ ಮಹಿಳೆ ಜನ್ಮ ನೀಡಿದ್ದಾಳೆ. ರೈಲು ಕಲ್ಯಾಣ್ ನಿಲ್ದಾಣಕ್ಕೆ ಬರ್ತಿದ್ದಂತೆ ಗರ್ಭಿಣಿಗೆ ಹೆರಿಗೆ ನೋವು ಜೋರಾಗಿದೆ.

ರೈಲ್ವೆ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಮಧ್ಯೆಯೇ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಕಲ್ಯಾಣ್ ನಿಲ್ದಾಣದ ಮ್ಯಾನೇಜರ್, ಮಧ್ಯ ರೈಲ್ವೆ ವೈದ್ಯಕೀಯ ತಂಡ ಹಾಗೂ ರೈಲ್ವೆ ಪೊಲೀಸ್ ಸ್ಥಳದಲ್ಲಿದ್ದರು. ಮಕ್ಕಳಿಗೆ ಜನ್ಮ ನೀಡಿದ ನಂತ್ರ ತಾಯಿ-ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೇಖ್ ಕುಟುಂಬ ಘಾಟ್ಕೋಪರ್ ಘೌಸಿಯಾ ಮಸೀದಿ ಬಳಿಯ ವಸಾಹತು ಪ್ರದೇಶದಲ್ಲಿ ವಾಸಿಸುತ್ತಿದೆ. ಅವಳಿ ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆಂದು ಮಧ್ಯ ರೈಲ್ವೆ ವೈದ್ಯರು ತಿಳಿಸಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...