alex Certify
ಕನ್ನಡ ದುನಿಯಾ       Mobile App
       

Kannada Duniya

ದೈಹಿಕ ಸುಖ ನೀಡಲು ನಿರಾಕರಿಸಿದ್ದಕ್ಕೆ ಹತ್ಯೆ

ಗುಜರಾತ್‌ನ ಗಾಂಧಿನಗರದಲ್ಲಿ ಸೆಕ್ಸ್ ಗೆ ನಿರಾಕರಣೆ ಮಾಡಿದಕ್ಕೆ ಮಹಿಳೆ ಹಾಗೂ ಆಕೆಯ ಸ್ನೇಹಿತನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಆಗಸ್ಟ್ 1 ರಂದು ಆರೋಪಿಗಳು ಪರಾರಿಯಾಗುತ್ತಿದ್ದಾಗ ಒಖಾ ಬಳಿ ಬಂಧನಕ್ಕೊಳಗಾಗಿದ್ದಾರೆ.

ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 1ರಂದು ಆರೋಪಿಗಳು ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ, ದೈಹಿಕ ಸುಖ ನೀಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ. ಆರೋಪಿಗಳು ಆಕೆ ಮೇಲೆ ಹಲ್ಲೆ ನಡೆಸಲು ಮುಂದಾದಾಗ, ಸ್ನೇಹಿತ ಸುಲೇಮಾನ್ ಸಿದ್ದಿಕಿ ಜಗಳವನ್ನು ತಡೆಯಲು ಮುಂದಾಗಿದ್ದಾನೆ.

ಸುಲೇಮಾನ್ ಮಾತಿಗೂ ಮಣೆ ಹಾಕದೆ, ಇಬ್ಬರನ್ನೂ ಕೊಂದು ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ರು. ಶ್ವಾನ ದಳದ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...