alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯರ ಶಬರಿಮಲೆ ಪ್ರವೇಶ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ ನಟ

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಮಹಿಳೆಯರನ್ನು ಎರಡು ಭಾಗವಾಗಿ ಸೀಳಿ ಹಾಕಬೇಕು ಎಂಬ ದಕ್ಷಿಣ ಭಾರತೀಯ ನಟ ಕೊಲ್ಲಂ ತುಳಸಿ ನೀಡಿರುವ ಹೇಳಿಕೆ ಭಾರಿ ವಿವಾದ ಹುಟ್ಟಿಹಾಕಿದೆ.

ಕೊಲ್ಲಂನಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ತುಳಸಿ, ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳಲ್ಲಿ ಹೆಚ್ಚಾಗಿ ನಟಿಸಿದ್ದಾರೆ. “ಶಬರಿಮಲೆ ದೇವಸ್ಥಾನಕ್ಕೆ ಬರುವ ಮಹಿಳೆಯರ ದೇಹವನ್ನು ಸೀಳಿ ಹಾಕಬೇಕು. ಅದರ ಒಂದು ಭಾಗವನ್ನು ದೆಹಲಿಗೆ ಕಳುಹಿಸಬೇಕು ಮತ್ತು ಉಳಿದ ಅರ್ಧವನ್ನು ತಿರುವನಂತಪುರಂನ ಮುಖ್ಯಮಂತ್ರಿ ಕಚೇರಿಗೆ ಕಳುಹಿಸಬೇಕು ಎಂದಿದ್ದಾರೆ.

ಕೇರಳದ ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ನೀಡಿದ ಹೇಳಿಕೆಯಾಗಿದೆ.

ಈ ಮಧ್ಯೆ ಮಂಗಳವಾರ ಮೇಲ್ಮನವಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ರಾಷ್ಟ್ರೀಯ ಅಯ್ಯಪ್ಪ ಭಕ್ತರ ಅಸೋಸಿಯೇಷನ್ ಮತ್ತು ನಾಯರ್ ಸರ್ವೀಸ್ ಸೊಸೈಟಿ (ಎನ್ಎಸ್ಎಸ್) ನಿಂದ ಸಲ್ಲಿಸಲಾದ ಎರಡು ಅರ್ಜಿಗಳನ್ನು, ಕೋರ್ಟ್ ತೀರ್ಪನ್ನು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದವು. ತೀರ್ಪು “ಸಂಪೂರ್ಣ ಅಸಮರ್ಥನೀಯ” ಎಂದು ಅದು ಆರೋಪಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...