alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ನಾಯಕರಿಗೆ ‘ಶಾಕ್’ ಕೊಟ್ಟ ಮತ್ತೊಬ್ಬ ಹಿರಿಯ ನಾಯಕಿ

2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಮಧ್ಯೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ತಾವು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಪಕ್ಷದ ನಾಯಕರಿಗೆ ‘ಶಾಕ್’ ನೀಡಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಇದಕ್ಕೆ ಬಿಜೆಪಿ ವರಿಷ್ಠರು ಸಹ ಒಪ್ಪಿಕೊಂಡಿದ್ದರಲ್ಲದೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಚಿಂತನೆ ನಡೆಸಿದ್ದರು.

ಇದೀಗ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿ, ಕೇಂದ್ರ ಸಚಿವೆ ಉಮಾ ಭಾರತಿ, ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳುವ ಮೂಲಕ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ. ಆದಾಗ್ಯೂ ತಾವು ರಾಜಕಾರಣದಲ್ಲಿ ಮುಂದುವರಿಯುವುದಾಗಿ ಹೇಳಿರುವ ಉಮಾ ಭಾರತಿ, ಮಂಡಿ ನೋವಿನಿಂದ ಬಳಲುತ್ತಿರುವ ತಾವು, ಕೊಂಚ ಕಾಲ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...