alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗಿ ಜೊತೆ ಸಾಂಕೇತಿಕವಾಗಿ ಮದುವೆಯಾಗಿದ್ದ ಮಹಿಳೆಗೆ ಜೈಲು

ಉತ್ತರ ಪ್ರದೇಶದ ಸೀತಾಪುರದಲ್ಲಿ ನಾಲ್ಕು ಮಹಿಳೆಯರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಇದ್ರಲ್ಲಿ ಒಬ್ಬ ಮಹಿಳೆ ಡಿಸೆಂಬರ್ 5ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಫೋಟೋದೊಂದಿಗೆ ಸಾಂಕೇತಿಕವಾಗಿ ಮದುವೆ ಮಾಡಿಕೊಂಡಿದ್ದರು.

ಸೀತಾಪುರ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ನೀತು ಸಿಂಗ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ನಾಲ್ವರು ಮುಖ್ಯಮಂತ್ರಿ ರಕ್ಷಣೆಗೆ ಅಡ್ಡಿಯುಂಟು ಮಾಡುವ ಪ್ರಯತ್ನ ಮಾಡಿದ್ದರು ಎನ್ನಲಾಗಿದೆ. ನಾಲ್ವರು ಮಹಿಳೆಯರ ವಿರುದ್ಧ ದೇಶದ್ರೋಹದ ದೂರು ದಾಖಲಾಗಿದೆ.

ಶನಿವಾರ ನಾಲ್ವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿ ಮಹಿಳೆಯರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನ್ಯಾಯಾಲಯದ ಮುಂದೆ ನೀತು ಸಿಂಗ್ ಪರ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಕೂಡ ನಡೆಸಿದ್ರು. ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ್ದೆ. ಅದಕ್ಕೆ ಈಗ ಈ ಶಿಕ್ಷೆ ನೀಡಲಾಗಿದೆ ಎಂದು ನೀತು ಸಿಂಗ್ ಹೇಳಿದ್ದಾರೆ.

ಈ ಮಹಿಳೆಯರು ಸಿಎಂ ಯೋಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ತಡೆದು ರಕ್ಷಣೆಗೆ ಅಡ್ಡಿಯುಂಟು ಮಾಡಿದ್ದರು. ಪದೇ ಪದೇ ರಸ್ತೆ ತಡೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು ಎನ್ನಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...