alex Certify
ಕನ್ನಡ ದುನಿಯಾ       Mobile App
       

Kannada Duniya

ಪಂದ್ಯ ನೋಡಲು ಐಸಿಸ್ ಉಗ್ರರು ಬಂದ್ರೆ ಕಷ್ಟ ಎಂದ ಸ್ವಾಮಿ

subramanian-swami

ವಿಶ್ವಕಪ್ ಟಿ 20 ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳ ಸೋಗಿನಲ್ಲಿ ಐಸಿಸ್ ಉಗ್ರರು ಬರುವ ಸಾಧ್ಯತೆ ಇದ್ದು, ಹಾಗಾಗಿ ಪಾಕ್ ಆಟಗಾರರಿಗೆ ಭಾರತಕ್ಕೆ ಬರಲು ಅವಕಾಶ ನೀಡಬಾರದಿತ್ತು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ವಿಶ್ವಕಪ್ ಟಿ20 ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಕೋಲ್ಕತ್ತಾಕ್ಕೆ ಸ್ಥಳಾಂತರಿಸಿದ ಬೆನ್ನಲ್ಲೇ ಪಂದ್ಯಕ್ಕೆ ಅಭಿಮಾನಿಗಳ ಸೋಗಿನಲ್ಲಿ ಐಸಿಸ್ ಉಗ್ರರು ಒಳ ಬರುವ ಸಾಧ್ಯತೆಗಳಿದ್ದು, ಹಾಗಾಗಿ ಪಾಕಿಸ್ತಾನ ತಂಡದ ಆಟಗಾರರಿಗೆ ಭಾರತದೊಳಗೆ ಪ್ರವೇಶ ನೀಡಿದ್ದು ದೊಡ್ಡ ತಪ್ಪು ಎಂದು ಸ್ವಾಮಿ ತಿಳಿಸಿದ್ದಾರೆ.

ಅಲ್ಲದೇ ಈ ಕುರಿತಾಗಿ ಗಡಿಯಲ್ಲಿ ಭದ್ರತಾ ಪಡೆಗಳ ನೆಲೆಗಳ ಮೇಲೆ ಉಗ್ರರು ಬಾಂಬ್ ಹಾಕುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನ ಆಟಗಾರರಿಗೆ ಭಾರತ ಪ್ರವೇಶ ನೀಡುವುದು ಸರಿಯಲ್ಲ ಎಂದು ಉದ್ಧವ್ ಠಾಕ್ರೆ ಅವರು ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ ಸ್ವಾಮಿ, ಭಾರತದ ಬದಲಿಗೆ ಶ್ರೀಲಂಕಾ, ಮಾಲ್ಡಿವ್ಸ್ ಅಥವಾ ಢಾಕಾದಲ್ಲಿ ಪಂದ್ಯವನ್ನು ಆಯೋಜಿಸಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದಿರುವ ಜತೆಗೆ ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸುವವರೆಗೂ ಯಾವುದೇ ಪಂದ್ಯಗಳನ್ನು ಭಾರತದಲ್ಲಿ ಆಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎನ್ನುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...