alex Certify
ಕನ್ನಡ ದುನಿಯಾ       Mobile App
       

Kannada Duniya

ಉನ್ನಾವೋ ರೇಪ್ ಪ್ರಕರಣ: ಮೌನ ಮುರಿದ ಯೋಗಿ

ಲಖ್ನೋ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ.ಜೆ.ಪಿ. ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನನ್ನು ಬಂಧಿಸದಿರುವ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ಅಲಹಾಬಾದ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಸಿ.ಬಿ.ಐ. ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದ್ದು, ಕುಲದೀಪ್ ಸಿಂಗ್ ವಿಚಾರಣೆ ನಡೆಸಿದೆ. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೌನ ಮುರಿದಿದ್ದು, ಯಾವುದೇ ಅಪರಾಧಿಗಳೊಂದಿಗೆ ನಮ್ಮ ಸರ್ಕಾರ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಆಡಳಿತ, ಅಪರಾಧಿ ಎಷ್ಟೇ ದೊಡ್ಡವರಾಗಿದ್ದರೂ, ಕ್ರಮ ಕೈಗೊಳ್ಳಲಿದೆ. ಪ್ರಕರಣದ ಮಾಹಿತಿ ಬಂದ ಕೂಡಲೇ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಆರೋಪಿಗಳ ರಕ್ಷಿಸುವುದಿಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...