alex Certify
ಕನ್ನಡ ದುನಿಯಾ       Mobile App
       

Kannada Duniya

”ದುಷ್ಕರ್ಮಿಗಳು ಜೈಲಿಗೆ ಹೋಗ್ತಾರೆ ಇಲ್ಲ ಯಮರಾಜನ ಬಳಿ”

ಸ್ಥಳೀಯ ಚುನಾವಣೆಗೂ ಮುನ್ನ ಪಶ್ಚಿಮ ಮುಜಫರ್ನಗರದಲ್ಲಿ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ನಡೆಸಿದ್ರು. ಈ ವೇಳೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಅಪರಾಧಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ವ್ಯಾಪಾರಿಗಳ ಅಪಹರಣ, ಲೂಟಿ ಘಟನೆಗಳು ನಡೆಯುತ್ತಿವೆ. ಇನ್ಮುಂದೆ ಇಂಥ ಘಟನೆಗಳು ನಡೆಯುವುದಿಲ್ಲ. ಒಂದು ವೇಳೆ ದುಷ್ಕರ್ಮಿಗಳು ಇಂಥ ಕೆಲಸಕ್ಕಿಳಿದ್ರೆ ಒಂದು ಜೈಲಿನಲ್ಲಿರುತ್ತಾರೆ ಇಲ್ಲ ಯಮರಾಜನ ಬಳಿ ಇರ್ತಾರೆಂದು ಎಚ್ಚರಿಕೆ ನೀಡಿದ್ದಾರೆ.

ಮುಜಾಫರ್ನಗರದಲ್ಲಿ ನಕಲಿ ಮೊಕದ್ದಮೆ ದಾಖಲಿಸುವ ಧೈರ್ಯ ಈಗ ಯಾರಿಗೂ ಇಲ್ಲವೆಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕಳೆದ 8 ತಿಂಗಳಿಂದ ರಾಜ್ಯದಲ್ಲಿ ಯಾವುದೇ ಗಲಭೆ ನಡೆದಿಲ್ಲ. ಸರ್ಕಾರ ತಾರತಮ್ಯ ಮಾಡುವುದಿಲ್ಲ. ಯಾರು ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡ್ತಾರೋ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಯೋಗಿ ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...