alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಗಲಿದೆ ಅಲಹಾಬಾದ್ ನಗರದ ಹೆಸರು

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಸಾಧು-ಸಂತರ ಮನವಿಯಂತೆ ಅಲಹಾಬಾದ್ ನಗರದ ಹೆಸರನ್ನು ಬದಲಾಯಿಸಲು ಮುಂದಾಗಿದೆ.

ಪುಣ್ಯ ಕ್ಷೇತ್ರವಾಗಿರುವ ಅಲಹಾಬಾದ್ ನಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ವಿಶ್ವ ಪ್ರಸಿದ್ಧ ಕುಂಭ ಮೇಳ ನಡೆಯಲಿದ್ದು, ಈ ಬಾರಿಯ ಕುಂಭಮೇಳ 2019ರ ಜನವರಿ 15ರಿಂದ ಆರಂಭವಾಗಲಿದೆ.

ಅಷ್ಟರೊಳಗಾಗಿ ಅಲಹಾಬಾದ್ ನಗರದ ಹೆಸರನ್ನು ಪ್ರಯಾಗ್ ರಾಜ್ ಎಂದು ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.

ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮವಾಗಿರುವ ಅಲಹಾಬಾದ್ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದ್ದು, ಇದರ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಲು ಸಾಧು-ಸಂತರು ಸರ್ಕಾರವನ್ನು ಒತ್ತಾಯಿಸಿದ್ದರು. ಸಾಧು-ಸಂತರ ಈ ಮನವಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...