alex Certify
ಕನ್ನಡ ದುನಿಯಾ       Mobile App
       

Kannada Duniya

100 ದಿನದ ಸಂಭ್ರಮದಲ್ಲಿದ್ದ CM ಯೋಗಿಗೆ ಬಿಗ್ ಶಾಕ್..!

omprakash-rajbhar

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು, 100 ನೇ ದಿನ ಸಂಭ್ರಮದಲ್ಲಿರುವ ಯೋಗಿ ಆದಿತ್ಯನಾಥ್ ಅವರಿಗೆ, ಸಂಪುಟದ ಸಚಿವರೊಬ್ಬರು ಬಿಗ್ ಶಾಕ್ ನೀಡಿದ್ದಾರೆ.

ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಓಂ ಪ್ರಕಾಶ್ ರಾಜ್ ಭರ್, ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಹಲವು ಭರವಸೆ ನೀಡಿ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರ ಬೇರೆ ಸರ್ಕಾರಗಳಿಗಿಂತ ಭಿನ್ನವಾಗಿಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ಥೆಯ ಮೇಲೆ ಪದೇ, ಪದೇ ಆಸಿಡ್ ದಾಳಿ ನಡೆದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳು ನಮ್ಮ ಮಾತನ್ನೇ ಕೇಳುತ್ತಿಲ್ಲ. ಇನ್ನು ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಕ್ಷೇತ್ರದ ಜನರೊಂದಿಗೆ ಹೋರಾಟ ನಡೆಸುತ್ತೇನೆ. ಅನಿವಾರ್ಯವಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ.

ಸಚಿವರೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಬಂಡಾಯದ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಬಿಂಬಿಸುವಂತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...