alex Certify
ಕನ್ನಡ ದುನಿಯಾ       Mobile App
       

Kannada Duniya

BJP ಫೈರ್ ಬ್ರಾಂಡ್ ಗೆ ಒಲಿಯಿತು ಸಿ.ಎಂ. ಹುದ್ದೆ

yogi-cm

ನವದೆಹಲಿ: ಗೋರಖ್ ನಾಥ್ ಮಠದ ಮಹಾಂತ ಹಾಗೂ ಗೋರಖ್ ಪುರ ಸಂಸದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲಖ್ನೋದಲ್ಲಿ ನಡೆದ ಬಿ.ಜೆ.ಪಿ. ಶಾಸಕಾಂಗ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡಲಾಗಿದೆ.

1998 ರಲ್ಲಿ ಗೋರಖ್ ಪುರ ಕ್ಷೇತ್ರದಿಂದ ಮೊದಲಬಾರಿಗೆ ಎಂ.ಪಿ.ಯಾಗಿದ್ದ ಅವರಿಗೆ 26 ವರ್ಷ ವಯಸ್ಸು, ಅಂದಿನಿಂದ ಸತತ 5 ಅವಧಿಗೆ ಅವರು ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬಿ.ಜೆ.ಪಿ. ಫೈರ್ ಬ್ರಾಂಡ್ ಖ್ಯಾತಿಯ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸಿ.ಎಂ. ರೇಸ್ ನಲ್ಲಿದ್ದ ಘಟಾನುಘಟಿಗಳನ್ನು ಹಿಂದಿಕ್ಕಿದ್ದಾರೆ.

ನಾಳೆ ಮಧ್ಯಾಹ್ನ ಲಖ್ನೋದ ಕಾನ್ಶಿರಾಮ್ ಸ್ಮೃತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ, ಕೇಶವ್ ಪ್ರಸಾದ್ ಮೌರ್ಯ, ದಿನೇಶ್ ಶರ್ಮ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...