alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ ಸಿ.ಎಂ.

yogi-cm

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ಬಳಿಕ, ಹಲವಾರು ಆದೇಶಗಳು ಜಾರಿಗೆ ಬಂದಿವೆ.

ಇನ್ನುಮುಂದೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿಯಾಗಿ ಕ್ಲಿನಿಕ್ ಗಳನ್ನು ನಡೆಸದಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 56 ಹೊಸ ವೆಂಟಿಲೇಟರ್ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಪ್ರದೇಶಕ್ಕೆ ಹೆಚ್ಚಿನ ವೈದ್ಯರ ಅವಶ್ಯಕತೆ ಇದೆ. ಆದರೆ, ವೈದ್ಯರ ಸಂಖ್ಯೆ ಕಡಿಮೆ ಇದೆ. ಇದನ್ನು ಮನಗಂಡು, ವೈದ್ಯರು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕೆಂದು ಸೂಚಿಸಿದ್ದಾರೆ.

ರೋಗಿಗಳನ್ನು ಆತ್ಮೀಯವಾಗಿ ಕಾಣಬೇಕು. ಇದರಿಂದ ಅವರ ಅರ್ಧ ಕಾಯಿಲೆ ಗುಣಮುಖವಾಗುತ್ತದೆ ಎಂದು ಹೇಳಿದ್ದಾರೆ. ದುಬಾರಿ ಚಿಕಿತ್ಸೆ ಹೆಸರಿನಲ್ಲಿ ರೋಗಿಗಳ ಶೋಷಣೆ ಮಾಡುವುದನ್ನು ನಿಲ್ಲಿಸಬೇಕು. ಹಣ ಗಳಿಸುವುದೇ ಉದ್ದೇಶವಾಗಬಾರದು. ವೈದ್ಯಕೀಯ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...