alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗ ಗುರು ಜೊತೆ ಸಿಎಂ ಯೋಗಿ ಯೋಗ

yogi-yoga-2_555_060717075812

ಅಂತರಾಷ್ಟ್ರೀಯ ಯೋಗ ದಿನಕ್ಕೂ ಮೊದಲೇ ಉತ್ತರ ಪ್ರದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜಭವನದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಮ್ ನಾಯ್ಕ್, ಸಿಎಂ ಯೋಗಿ ಜೊತೆ ಯೋಗ ಮಾಡಿದ್ರು.

ಯೋಗ ಗುರು ಬಾಬಾ ರಾಮದೇವ್ ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದ್ದರು. ಜನರಿಗೆ ಯೋಗ ಮುದ್ರೆಗಳನ್ನು ಬಾಬಾ ರಾಮದೇವ್ ಹೇಳಿಕೊಟ್ರು. ಸಹರಾನ್ಪುರದಲ್ಲಿ ವಾಸಿಸುವ ಯೋಗ ಗುರು ಭರತ್ ಭೂಷಣ್ ಸಲಹೆ ಮೇರೆಗೆ ರಾಜಭವನದಲ್ಲಿ ಈ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯೋಗಿ, ರಾಮ್ ನಾಯ್ಕ್ ಜೊತೆ ಭರತ್ ಭೂಷಣ್ ಪಾಲ್ಗೊಂಡಿದ್ದರು.

ರಾಜ್ಯದ ಮಂತ್ರಿಗಳು, ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಈ ಯೋಗ ಕಾರ್ಯಕ್ರಮದ ಲಾಭ ಪಡೆದ್ರು. ಅಂತರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಜೂನ್ 21ರಂದು ಲಕ್ನೋದ ರಮಾಬಾಯಿ ಅಂಬೇಡ್ಕರ್ ಪಾರ್ಕ್ ನಲ್ಲಿ ಯೋಗ ಶಿಬಿರ ಆಯೋಜಿಸಲಾಗಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...