alex Certify
ಕನ್ನಡ ದುನಿಯಾ       Mobile App
       

Kannada Duniya

ಫಿಲ್ಮ್ ಸಿಟಿಯಾಗಲಿದೆ ಮೋದಿ ಸಂಸದೀಯ ಕ್ಷೇತ್ರ

download-2

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕ್ಷೇತ್ರ ವಾರಾಣಸಿ ಚಿತ್ರ ನಿರ್ಮಾಪಕರ ನೆಚ್ಚಿನ ತಾಣ. ಜಾಲಿ ಎಲ್ಎಲ್ ಬಿ-2 ಸೇರಿದಂತೆ ಕೆಲ ಚಿತ್ರಗಳನ್ನು ಇಲ್ಲಿ ಚಿತ್ರೀಕರಿಸಲಾಗಿದೆ. ಚಲನಚಿತ್ರ ಪ್ರಪಂಚದಲ್ಲಿ ವಾರಣಾಸಿ ಪ್ರಾಮುಖ್ಯತೆಯನ್ನು ಗಮನಿಸಿರುವ ಉತ್ತರ ಪ್ರದೇಶದ ಯೋಗಿ ಸರ್ಕಾರ, ಈ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿದೆ.

ವಾರಾಣಸಿಯನ್ನು ಫಿಲ್ಮ್ ಸಿಟಿ ಮಾಡುವ ಬಗ್ಗೆ ಯೋಗಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಗುರುವಾರ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಯುಪಿಯ ಮಾಹಿತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ವಿಷಯ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಚಿತ್ರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ನೀತಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದ ನಿರ್ಮಾಪಕರು, ಕಲಾವಿದರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಪ್ರಾದೇಶಿಕ ಚಿತ್ರಗಳ ನಿರ್ಮಾಣದಿಂದ ಆರ್ಥಿಕ ವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...