alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತಷ್ಟು ದುಬಾರಿಯಾಗಲಿದೆ ವಿಮಾನ ಪ್ರಯಾಣ

ವಿಮಾನ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಪ್ರಯಾಣಿಕರ ಸೇವಾ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು, ಟಿಕೆಟ್ ದರ ಹೆಚ್ಚಾಗಲಿದೆ. ವಿಮಾನ ನಿಲ್ದಾಣಗಳಲ್ಲಿನ ಭದ್ರತಾ ವೆಚ್ಚ ಸರಿದೂಗಿಸಲು ಸರ್ಕಾರ ಸೇವಾ ಶುಲ್ಕ ಹೆಚ್ಚಳಕ್ಕೆ ಚಿಂತನೆ ನಡೆಸಿದೆ.

ಸಿಎಫ್ಐ ಭದ್ರತಾ ವೆಚ್ಚ ಸರಿದೂಗಿಸಲಿದೆ ಅಂತಾ ಕೇಂದ್ರ ಸರ್ಕಾರ ಹೇಳಿತ್ತು. ಆದ್ರೆ ನಷ್ಟ ಸರಿದೂಗಿಸಲು ಹಣಕಾಸು ಇಲಾಖೆ ನಿರಾಕರಿಸಿದೆ. ಹಾಗಾಗಿ ಆದಾಯ ಹೆಚ್ಚಿಸಿಕೊಳ್ಳಲು ಅನಿವಾರ್ಯವಾಗಿ ಪ್ರಯಾಣಿಕರ ಸೇವಾ ಶುಲ್ಕ ಏರಿಕೆ ಮಾಡಲು ಮುಂದಾಗಿದೆ.

ಪ್ರತಿ ಟಿಕೆಟ್ ಗೆ 50 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ. ಸದ್ಯ ಪ್ರತಿ ಟಿಕೆಟ್ ಗೆ 130 ರೂಪಾಯಿ ಸೇವಾ ಶುಲ್ಕ ವಿಧಿಸಲಾಗುತ್ತಿದೆ. ಸೇವಾ ಶುಲ್ಕ ಹೆಚ್ಚಳದ ಮೂಲಕ ಖೋತಾ ಆಗುತ್ತಿರುವ ಆದಾಯವನ್ನು ಸರಿದೂಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...