alex Certify
ಕನ್ನಡ ದುನಿಯಾ       Mobile App
       

Kannada Duniya

ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 11-30 ರ ಸುಮಾರಿಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ದಾಳಿಯಲ್ಲಿ ಗಾಯಗೊಂಡಿದ್ದ ಯುವಕ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಯುವ ಕಾಂಗ್ರೆಸ್ ಮಂಡಲ ಮಾಜಿ ಅಧ್ಯಕ್ಷ, ಎಡನಯೂರು ನಿವಾಸಿ ಸುಹೇಬ್ ಹತ್ಯೆಯಾದ ಯುವಕನಾಗಿದ್ದು, ಈತ ಸೋಮವಾರದಂದು ಕಾಂಗ್ರೆಸ್ ಪಕ್ಷದ ಕೆಲ ಪದಾಧಿಕಾರಿಗಳೊಂದಿಗೆ ರಸ್ತೆ ಬದಿಯ ಅಂಗಡಿಯೊಂದರಲ್ಲಿ ಟೀ ಕುಡಿಯುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ವ್ಯಾನ್ ನಲ್ಲಿ ಬಂದ ದುಷ್ಕರ್ಮಿಗಳು ಮೊದಲಿಗೆ ಕಚ್ಚಾ ಬಾಂಬ್ ಎಸೆದಿದ್ದು, ನಂತರ ತಮ್ಮಲ್ಲಿದ್ದ ಆಯುಧಗಳಿಂದ ಸುಹೇಬ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಸುಹೇಬ್ ಹಾಗೂ ಮತ್ತಿಬ್ಬರನ್ನು ಕೂಡಲೇ ಕೋಝಿಕೋಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸುಹೇಬ್ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಸುಹೇಬ್ ಹತ್ಯೆ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇಂದು ಕಣ್ಣೂರು ಜಿಲ್ಲೆಯಲ್ಲಿ 12 ಗಂಟೆಗಳ ಹರತಾಳಕ್ಕೆ ಕರೆ ನೀಡಿದೆ. ಆದರೆ ಕಾಂಗ್ರೆಸ್ ಆರೋಪವನ್ನು ಸಿಪಿಎಂ ತಳ್ಳಿ ಹಾಕಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...