alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ನಲ್ಲಿ ಬಸ್ ಸ್ಪೋಟಿಸಿದ ಉಗ್ರರು: 15 ಮಂದಿ ಸಾವು

peshawar-bus-blast 1

ಉಗ್ರರ ‘ತವರುಮನೆ’ ಎನಿಸಿರುವ ಪಾಕಿಸ್ತಾನದಲ್ಲಿ ಉಗ್ರ ಕೃತ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ನಿದರ್ಶನವೆಂಬಂತೆ ಸರ್ಕಾರಿ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅನ್ನು ಸ್ಪೋಟ ನಡೆಸಿರುವ ಉಗ್ರರು ಬರೋಬ್ಬರಿ ಹದಿನೈದು ಮಂದಿಯ ಸಾವಿಗೆ ಕಾರಣರಾಗಿದ್ದಾರೆ.

ಹೌದು. ಪಾಕ್ ನ ಪೇಶಾವರದಲ್ಲಿ ಈ ಘಟನೆ ನಡೆದಿದ್ದು, ಐವತ್ತಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸ್ಪೋಟಗೊಂಡಿದ್ದು ಘಟನೆಯಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದರೆ 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೇ ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಉಗ್ರರು ಈ ಹತ್ಯೆ ನಡೆಸಲೆಂದೇ ಬಸ್ ನಲ್ಲಿ ಬಾಂಬ್ ಇಟ್ಟಿದ್ದರು ಎನ್ನಲಾಗಿದ್ದು, ಈವರೆಗೂ ಯಾವುದೇ ಉಗ್ರ ಸಂಘಟನೆ ಕೃತ್ಯದ ಹೊಣೆ ಹೊತ್ತಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...