alex Certify
ಕನ್ನಡ ದುನಿಯಾ       Mobile App
       

Kannada Duniya

ಕಮರಿಗೆ ಉರುಳಿದ ಬಸ್; 17 ಮಂದಿ ಸಾವು

17-killed-in-Nepal-road-accidentನೇಪಾಳದಲ್ಲಿ ಬಸ್ ಒಂದು ಕಮರಿಗೆ ಉರುಳಿದ ಪರಿಣಾಮ 17 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ. ಗಾಯಾಳುಗಳ ಪೈಕಿ ಆರು ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರುಗಳನ್ನು ಹೆಲಿಕಾಪ್ಟರ್ ಮೂಲಕ ಕಾಠ್ಮಂಡುವಿಗೆ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಡಿಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಈ ಬಸ್ ಜಿಲ್ಲಾ ಕೇಂದ್ರಕ್ಕೆತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಡಿದಾದ ರಸ್ತೆಯಲ್ಲಿ ಸಾಗುತ್ತಿದ್ದಾಗ 300 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಈ ದುರಂತ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ 17 ಮಂದಿ ಪೈಕಿ 10 ಮಂದಿ ಪುರುಷರು ಹಾಗೂ ನಾಲ್ಕು ಮಂದಿ ಮಹಿಳೆಯರ ಮೃತ ದೇಹವನ್ನು ಹೊರ ತೆಗೆಯಲಾಗಿದ್ದು, ಬಸ್ ನಲ್ಲಿ ಲುಕಿಕೊಂಡ ಇನ್ನುಳಿದ ದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...