alex Certify
ಕನ್ನಡ ದುನಿಯಾ       Mobile App
       

Kannada Duniya

ಆತ್ಮಾಹುತಿ ದಾಳಿಗೆ ಬಲಿಯಾದ್ರು 22 ಮಂದಿ

lahore-dd

ಲಾಹೋರ್: ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಅವರ ನಿವಾದ ಬಳಿ ನಡೆದ, ಆತ್ಮಾಹುತಿ ದಾಳಿಗೆ 22 ಮಂದಿ ಬಲಿಯಾಗಿದ್ದು, 30 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾಹೋರ್ ನಲ್ಲಿರುವ ಶಹಬಾಜ್ ನಿವಾಸದ ಬಳಿ ಆತ್ಮಾಹುತಿ ದಾಳಿಕೋರನೊಬ್ಬ ಸ್ಪೋಟಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಜನರ ದೇಹಗಳು ಛಿದ್ರವಾಗಿವೆ.

ದಾಳಿಕೋರನ ಗುರುತು ಸಿಗದಷ್ಟು ದೇಹ ಛಿದ್ರವಾಗಿದೆ. ಲಾಹೋರ್ ಪೊಲೀಸರು ಹಾಗೂ ಅಧಿಕಾರಿಗಳು ಕೂಡ ಮೃತರಲ್ಲಿ ಸೇರಿದ್ದಾರೆ.

ಶಹಬಾಜ್ ಮನೆಯ ಸಮೀಪದಲ್ಲೇ ಇರುವ ಆರ್ಪಾ ಕರೀಮ್ ಪ್ರದೇಶದಲ್ಲಿ ಲಾಹೋರ್ ಡೆವಲಪ್ ಮೆಂಟ್ ಅಥಾರಿಟಿ ಅಧಿಕಾರಿಗಳು ಪೊಲೀಸರ ಸಹಕಾರದಿಂದ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ದಾಳಿಕೋರ ಸ್ಪೋಟಿಸಿಕೊಂಡಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅವರಲ್ಲಿ ಅನೇಕರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...