alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಲೆ ಕೇಸ್ ನಲ್ಲಿ 4 ವರ್ಷದ ಬಾಲಕನಿಗೆ ಜೀವಾವಧಿ ಶಿಕ್ಷೆ

4 balaka

ಕೆಲವೊಮ್ಮೆ ಯಡವಟ್ಟಿನಿಂದ ಏನೆಲ್ಲಾ ಅನಾಹುತ ನಡೆಯುತ್ತವೆ ಎಂಬುದಕ್ಕೆ ಕೈರೋದಲ್ಲಿ ನಡೆದ ಈ ಪ್ರಕರಣ ಉದಾಹರಣೆಯಾಗಿದೆ. ಪಶ್ಚಿಮ ಕೈರೋ ಭಾಗದ ಬಿಜಾರೆ ನ್ಯಾಯಾಲಯವೊಂದು 4 ವರ್ಷದ ಬಾಲಕನೊಬ್ಬನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರಸ್ತುತ 4 ವರ್ಷ ವಯಸ್ಸಿನ ಈ ಬಾಲಕ ಎರಡು ವರ್ಷದ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕ ಆಸ್ತಿಗೆ ಹಾನಿ ಪ್ರಕರಣ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಲಾಗಿತ್ತು. ಹೀಗೆ 4 ವರ್ಷದ ಬಾಲಕ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆಂದು ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರೆನ್ನಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಪಶ್ಚಿಮ ಕೈರೋ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ.

ಅಸಲಿಗೆ ಈ ಬಾಲಕ ಕೃತ್ಯದಲ್ಲಿ ಭಾಗಿಯಾಗಿರದಿದ್ದರೂ, ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು. ತೀರ್ಪು ನೀಡುವಾಗ ಬಾಲಕ ಇರಲಿಲ್ಲ. ಪೊಲೀಸರು ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಮತ್ತು ನ್ಯಾಯಾಧೀಶರು ತೀರ್ಪಿನ ಆದೇಶ ಸಂದರ್ಭದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಹೀಗೆ ಆಗಿದೆ. ಕೊನೆಗೆ ಬಾಲಕನ ಜನ್ಮದಿನಾಂಕದ ಪ್ರಮಾಣಪತ್ರ ಸಲ್ಲಿಸಿ ಆರೋಪ ಪಟ್ಟಿಯಿಂದ ಹೆಸರು ತೆಗೆಸುವ ಪ್ರಕ್ರಿಯೆ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...