alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯವರ ವಿರುದ್ಧ FIR ದಾಖಲಿಸಲು ಮುಂದಾದ ಪಾಕ್ ವಕೀಲ

modi-ptiಕಾಶ್ಮೀರದಲ್ಲಿ ಮುಗ್ದರ ಹತ್ಯೆ ನಡೆಯುತ್ತಿದೆ. ಹೀಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ FIR ದಾಖಲಿಸಬೇಕೆಂದು ಕೋರಿ ಪಾಕಿಸ್ತಾನದ ವಕೀಲರೊಬ್ಬರು ಲಾಹೋರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಅಬ್ದುಲ್ ಹಮೀದ್ ಈ ಅರ್ಜಿ ಸಲ್ಲಿಸಿದ್ದು, ಮುಗ್ದರ ಹತ್ಯೆಗೆ ಕುಮ್ಮಕ್ಕು ನೀಡುತ್ತಿರುವ ಭಾರತದ ಪ್ರದಾನಿ ನರೇಂದ್ರ ಮೋದಿಯವರ ವಿರುದ್ಧ ಹತ್ಯೆ ಮತ್ತು ಭಯೋತ್ಪಾದನೆ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಬೇಕೆಂದು ಮನವಿ ಮಾಡಿದ್ದಾರೆ.

ಭಾರತದ ವಕೀಲ ವೀರೇಶ್ ಶಾಂಡಿಲ್ಯ ಎಂಬವರು, ಅಂಬಾಲ ಕೋರ್ಟ್ ನಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ವಿರುದ್ಧ, ಜಮ್ಮು- ಕಾಶ್ಮೀರದ ಗಲಭೆಗೆ ಕುಮ್ಮಕ್ಕು ನೀಡುತ್ತಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ಪಾಕಿಸ್ತಾನಿ ವಕೀಲರು ಮೋದಿಯವರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...