alex Certify
ಕನ್ನಡ ದುನಿಯಾ       Mobile App
       

Kannada Duniya

ಅಫ್ಘಾನ್ ಕ್ರಿಕೆಟಿಗನ ಮೇಲೆ ಗುಂಡಿನ ದಾಳಿ

shapoor-zadranಅಫ್ಘಾನಿಸ್ತಾನದ ಕ್ರಿಕೆಟ್ ಆಟಗಾರ ಶಾಪೂರ್ ಜರ್ದಾನ್ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಶಾಪೂರ್ ಜರ್ದಾನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಬಗ್ರಾಮಿ ಏರಿಯಾದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಶಾಪೂರ್ ಜರ್ದಾನ್ ತನ್ನ ಸಹೋದರನೊಂದಿಗೆ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದಾನೆ.

ಶಾಪೂರ್ ಜರ್ದಾನ್ ಹಾಗೂ ಅವರ ಸಹೋದರ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯ ಹೊಣೆಯನ್ನು ಉಗ್ರಗಾಮಿ ಸಂಘಟನೆ ನಡೆಸಿದೆಯೋ ಅಥವಾ ವೈಯಕ್ತಿಕ ಕಾರಣಗಳಿಗಾಗಿ ಈ ದಾಳಿ ನಡೆದಿದೆಯೋ ಎಂಬುದು ಬಹಿರಂಗವಾಗಿಲ್ಲ. ಈ ಹಿಂದೆಯೂ ಶಾಪೂರ್ ಜರ್ದಾನ್ ಮೇಲೆ ದಾಳಿ ಯತ್ನ ನಡೆದಿತ್ತೆನ್ನಲಾಗಿದ್ದು, ಅಫ್ಘಾನ್ ಕ್ರಿಕೆಟ್ ಬೋರ್ಡ್ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಡೋನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಜನಾಂಗೀಯ ದ್ವೇಷ ಹೆಚ್ಚಾಗುತ್ತಿದೆಯೇ..?

    View Results

    Loading ... Loading ...