alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಕೆಯಾಗುತ್ತಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆದ ಭೂಪ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದವನೊಬ್ಬ ತನಗೆ ತುಂಬಾ ಸೆಕೆಯಾಗುತ್ತಿದೆ ಎಂಬ ಕಾರಣಕ್ಕೆ ಹಾರಲು ರೆಡಿಯಾಗಿದ್ದ ವಿಮಾನದ ತುರ್ತು ನಿರ್ಗಮನ ದ್ವಾರ ತೆಗೆದು ಸಹ ಪ್ರಯಾಣಿಕರನ್ನು ಆತಂಕಕ್ಕೀಡು ಮಾಡಿದ ಘಟನೆ ಚೀನಾದಲ್ಲಿ ನಡೆದಿದೆ.

25 ವರ್ಷದ ಚೆನ್ ಇಂತಹ ಕೆಲಸ ಮಾಡಿ ಈಗ ದುಬಾರಿ ದಂಡ ತೆರುವುದಲ್ಲದೇ ಜೈಲು ಶಿಕ್ಷೆಯನ್ನೂ ಅನುಭವಿಸಬೇಕಾಗಿದೆ. ವಿಮಾನದ ತನ್ನ ಸೀಟಿನಲ್ಲಿ ಆಸೀನನಾದ ಚೆನ್ ಪಕ್ಕದಲ್ಲಿದ್ದ ತುರ್ತು ನಿರ್ಗಮನ ದ್ವಾರ ತೆಗೆದಿದ್ದು, ಭಾರೀ ಸೆಕೆಯಾಗುತ್ತಿದೆ ಎಂಬ ಕಾರಣಕ್ಕೆ ಅರಿಯದೆ ಈ ತಪ್ಪು ಮಾಡಿದ್ದಾಗಿ ಹೇಳಿದ್ದಾನೆ.

ಚೆನ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನಿಗೆ 11 ಸಾವಿರ ಡಾಲರ್ ದಂಡ ಹಾಗೂ 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...