alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಉರುಳಿ ಬಿದ್ದು 27 ಮಂದಿಯ ದುರ್ಮರಣ

ಇಳಿಜಾರಿನಲ್ಲಿ ವೇಗವಾಗಿ ಸಾಗುತ್ತಿದ್ದ ಪ್ರವಾಸಿಗರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಉರುಳಿ ಬಿದ್ದ ಪರಿಣಾಮ 27 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ನಡೆದಿದೆ.

ಪಶ್ಚಿಮ ಜಾವಾದಲ್ಲಿ ಶನಿವಾರದಂದು ಈ ಭೀಕರ ಅಪಘಾತ ಸಂಭವಿಸಿದ್ದು, ಕಣಿವೆ ಪ್ರದೇಶದ ಇಳಿಜಾರಿನಲ್ಲಿ ಬಸ್ ವೇಗವಾಗಿ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಬಸ್ ಉರುಳಿ ಬಿದ್ದಿದೆ.

ಈ ಬಸ್ ನಲ್ಲಿ 40 ಮಂದಿ ಪ್ರಯಾಣಿಕರಿದ್ದರೆಂದು ಹೇಳಲಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಬಸ್ ನಲ್ಲಿದ್ದ ಪ್ರವಾಸಿಗರೆಲ್ಲರೂ ಜಾವಾದ ಬಂತೀನ್ ಪ್ರಾಂತ್ಯದವರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...