alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 36 ಮಂದಿ ದಾರುಣ ಸಾವು

ಲಿಮಾ(ಪೆರು): ಪೆರು ರಾಜಧಾನಿ ಲಿಮಾದಿಂದ 130 ಕಿಲೋ ಮೀಟರ್ ದೂರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯಾಣಿಕರಿಂದ ತುಂಬಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಬೆಟ್ಟದ ರಸ್ತೆಯಿಂದ ಜಾರಿ ಸುಮಾರು 100 ಮೀಟರ್ ಆಳಕ್ಕೆ ತಲೆ ಕೆಳಗಾಗಿ ಬಿದ್ದಿದೆ.

ಬಸ್ ಸಮುದ್ರದ ತುದಿಯಲ್ಲಿನ ಬಂಡೆಯ ಮೇಲೆ ಅಪ್ಪಳಿಸಿದ್ದರಿಂದ ಹೆಚ್ಚಿನ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹುವಾಚೋದಿಂದ ಹೊರಟಿದ್ದ ಬಸ್ ಕಡಲತೀರದ ರಸ್ತೆಯಲ್ಲಿ ಸಾಗುವಾಗ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳು, ಮೃತದೇಹಗಳನ್ನು ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ. ಕೆಲವರನ್ನು ಹಗ್ಗದ ನೆರವಿನಿಂದ ಮೇಲಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಕಾಪಡೆಯ ಗಸ್ತು ದೋಣಿಗಳು ಸ್ಥಳಕ್ಕೆ ತೆರಳಿದ್ದು, ಬದುಕುಳಿದಿದ್ದ 6 ಮಂದಿಯನ್ನು ರಕ್ಷಿಸಲಾಗಿದೆ. ಎಲ್ ಕ್ಯಾಲ್ಲೊದಲ್ಲಿನ ಆಲ್ಕೈಡ್ಸ್ ಕ್ಯಾರಿಯೊನ್ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಕರಾವಳಿಯ ಹೆದ್ದಾರಿ ಇದಾಗಿದ್ದು, ಬಸ್ ಮತ್ತು ಟ್ರಕ್ ಗಳು ಮಾತ್ರ ಸಂಚರಿಸುತ್ತವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...