alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾದಲ್ಲಿ 82 ಬಲಿ

ಇಂಡೋನೇಷ್ಯಾದ ಲೋಂಬಾಕ್ ನ ಬಾಲಿ ದ್ವೀಪದಲ್ಲಿ ಭಾನುವಾರ ಭಾರೀ ಭೂಕಂಪ ಸಂಭವಿಸಿದೆ. ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 82 ಕ್ಕೇರಿದೆ. ನೂರಾರು ಮಂದಿ ಗಾಯಗೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ರಿಕ್ಟರ್ ಮಾಪಕದಲ್ಲಿ 6.9 ರಷ್ಟು ತೀವ್ರತೆ ದಾಖಲಾಗಿದೆ. ಬಾಲಿಯಲ್ಲಿ ಸಂಭವಿಸಿದ ಭೂಕಂಪಕ್ಕೆ ನೆರೆಹೊರೆಯ ಪ್ರದೇಶವೂ ಕಂಪಿಸಿದೆ. ಘಟನೆಯಲ್ಲಿ ಅನೇಕ ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿವೆ. ಸ್ಥಳೀಯರು ಮನೆ ಕಳೆದುಕೊಂಡಿದ್ದು, ಕುಡಿಯುವ ನೀರು, ಆಹಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಯಲ್ಲಿ ಒಟ್ಟು 82 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿಶಾಮಕ ದಳ, ಪೊಲೀಸ್ ಸೇರಿದಂತೆ ರಕ್ಷಣಾ ಪಡೆ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಪ್ರಬಲ ಭೂಕಂಪದಲ್ಲಿ ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...