alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳ ಮೇಲೆ ಕೊಡಲಿಯಿಂದ ದುಷ್ಕರ್ಮಿಗಳ ದಾಳಿ

ರಷ್ಯಾದ ಸೈಬೀರಿಯನ್ ನಗರದ ಯುಲನ್ ಉಡೆಯಲ್ಲಿ ಮೂವರು ದುಷ್ಕರ್ಮಿಗಳು ಶಾಲೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಕೊಡಲಿ ಸೇರಿದಂತೆ ಚೂಪಾದ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದುಷ್ಕರ್ಮಿಗಳು ಶಾಲೆ ಮೇಲೆ ದಾಳಿ ನಡೆಸಿದ್ದಾರೆ. ಶಾಲೆಗೆ ಬೆಂಕಿ ಹಚ್ಚಲೂ ಪ್ರಯತ್ನಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಮೂವರಿಗೆ ಗೆ ಗಂಭೀರ ಗಾಯಗಳಾಗಿದೆ. ವಾರದಲ್ಲಿ ಮೂರನೇ ಬಾರಿ ಈ ರೀತಿಯ ಘಟನೆ ನಡೆಯುತ್ತಿದೆ. ಮಾಹಿತಿ ಪ್ರಕಾರ 9ನೇ ತರಗತಿಯವರೆಗೆ ಕಲಿಸುವ ಈ ಶಾಲೆ ಮೇಲೆ ದಾಳಿ ನಡೆದಿದೆ. ದಾಳಿಕೋರರು ಕೊಡಲಿ ತಂದಿದ್ದು ಒಬ್ಬ ಶಿಕ್ಷಕಿ ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಾಯಗೊಂಡವರಲ್ಲಿ ಒಬ್ಬ ದುಷ್ಕರ್ಮಿ ಕೂಡ ಸೇರಿದ್ದಾನೆ ಎಂದು ಮೂಲಗಳು ಹೇಳಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...