alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯವರ ಭೇಟಿಗೂ ಮುನ್ನ ತ್ರಿವರ್ಣ ಧ್ವಜದಲ್ಲಿ ಕಂಗೊಳಿಸಿದ ಬುರ್ಜ್ ಖಲೀಫಾ

ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗುತ್ತಿದ್ದಂತೆಯೇ ವಿಶ್ವದ ಹಲವು ರಾಷ್ಟ್ರಗಳಿಗೆ ಭೇಟಿ ನೀಡುವ ಮೂಲಕ ಸೌಹಾರ್ದ ಸಂಬಂಧಕ್ಕೆ ಯತ್ನಿಸುತ್ತಿದ್ದಾರೆ. ಆ ಮೂಲಕ ವಿಶ್ವದ ಅಗ್ರಗಣ್ಯ ನಾಯಕರಾಗುವ ದಿಸೆಯಲ್ಲಿ ಹೆಜ್ಜೆಯಿಟ್ಟಿರುವ ಮೋದಿಯವರು ಇಂದಿನಿಂದ ಯುಎಇ ಪ್ರವಾಸ ಕೈಗೊಂಡಿದ್ದಾರೆ.

ನರೇಂದ್ರ ಮೋದಿಯವರು ಎರಡನೇ ಬಾರಿಗೆ ಯುಎಇ ಗೆ ಭೇಟಿ ನೀಡುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧದ ಕುರಿತು ಚರ್ಚೆ ನಡೆಸಲಿದ್ದಾರೆ.

ಇದರ ಮಧ್ಯೆ, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಯುಎಇ ಗೆ ಭೇಟಿ ನೀಡುತ್ತಿರುವ ಗೌರವಾರ್ಥ ವಿಶ್ವವಿಖ್ಯಾತ ಬುರ್ಜ್ ಖಲೀಫಾ ಅವರ ಆಗಮನಕ್ಕೆ ಒಂದು ದಿನದ ಮುನ್ನವೇ ಭಾರತದ ತ್ರಿವರ್ಣ ಧ್ವಜದೊಂದಿಗೆ ಕಂಗೊಳಿಸಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...