alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯುತ್ ತಂತಿ ಮೇಲೆ ಕುಳಿತ ಪಕ್ಷಿಯಿಂದಾಗಿದೆ ಭಾರೀ ಅನಾಹುತ

ಜರ್ಮನಿಯಲ್ಲಿ ಪಕ್ಷಿ ವಿದ್ಯುತ್ ಕಂಬದ ಮೇಲೆ ಕುಳಿತಾಗ, ಶಾರ್ಟ್ ಸರ್ಕಿಟ್ ನಿಂದ ಕೆಳಗೆ ಬಿದ್ದು ದೊಡ್ಡ ಅನಾಹುತ ಸಂಭವಿಸಿದೆ. ಪಕ್ಷಿಗೆ ಬೆಂಕಿ ಹತ್ತಿಕೊಂಡಿದ್ದು ಸುಮಾರು 17 ಎಕರೆ ಭೂಮಿಗೆ ಆವರಿಸಿದೆ. ಅಂದಹಾಗೆ ಈ ಬೆಂಕಿ ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ಒಣ ಭೂಮಿಗೆ ತಗುಲಿದೆ.

ಇದನ್ನು ಕಂಡ ಸ್ಥಳೀಯರು, ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದ್ರೆ, ಬೆಂಕಿ 17 ಎಕರೆ ಪ್ರದೇಶಕ್ಕೆ ವ್ಯಾಪಿಸಿದ್ದರಿಂದ, ಅಗ್ನಿ ಶಾಮಕ ಸಿಬ್ಬಂದಿಗೆ ಕೂಡಲೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಬೆಂಕಿಯ ರೌದ್ರಾವತಾರವನ್ನು ನೋಡಿ, ಹತ್ತಿರದಲ್ಲೇ ಇದ್ದ ರೈಲ್ವೆ ಕಂಬಗಳಿಗೆ ಹಾನಿ ಉಂಟು ಮಾಡುತ್ತದೆ ಎಂದು ತಿಳಿದು ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಈ ಕಾರ್ಯಚರಣೆಗೆ ಸುಮಾರು 7 ಹೆಲಿಕಾಪ್ಟರ್ಗಳನ್ನು ಬಳಕೆ ಮಾಡಲಾಗಿದೆ. ಶತ ಪ್ರಯತ್ನದ ನಂತರ ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬೆಂಕಿ ಹತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...