alex Certify
ಕನ್ನಡ ದುನಿಯಾ       Mobile App
       

Kannada Duniya

ರಷ್ಯಾದ ಕಲ್ಲಿದ್ದಲು ಗಣಿಯಲ್ಲಿ ಮರಣ ಮೃದಂಗ

coal-mine

ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಅಂಗೈಯಲ್ಲಿ ಜೀವ ಹಿಡಿದುಕೊಂಡೇ ಕೆಲಸ ಮಾಡುತ್ತಾರೆ. ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡುವುದು ಸವಾಲಾಗಿರುತ್ತದೆ. ಸ್ವಲ್ಪ ವ್ಯತ್ಯಾಸವಾದರೂ ಅಪಾಯ ಗ್ಯಾರಂಟಿ.

ಹೀಗೆ ಅಪಾಯಕಾರಿ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ 36 ಮಂದಿ ದುರಂತ ಸಾವು ಕಂಡ ಘಟನೆ ರಷ್ಯಾದಲ್ಲಿ ನಡೆದಿದೆ. ಉತ್ತರ ರಷ್ಯಾದಲ್ಲಿರುವ ಸೆವರ್ನಯಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಆಕಸ್ಮಿಕವಾಗಿ ಸ್ಪೋಟ ಉಂಟಾಗಿದ್ದು, 36 ಮಂದಿ ದುರಂತ ಸಾವು ಕಂಡಿದ್ದಾರೆ. ಸುಮಾರು 700 ಮೀಟರ್ ಆಳದಲ್ಲಿ ಗಣಿಗಾರಿಕೆ ನಡೆಯುವಾಗ ಸ್ಪೋಟ ಸಂಭವಿಸಿತ್ತು. ಈ ದುರಂತದಲ್ಲಿ ಐವರು ಕಾರ್ಮಿಕರು ಒಳಗೆ ಸಿಲುಕಿ ಸಾವು ಕಂಡಿದ್ದರು. ಅಲ್ಲದೇ 26 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದರು.

ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಮಿಥೇನ್ ಗ್ಯಾಸ್ ಸ್ಪೋಟ ಉಂಟಾಗಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದ 5 ಮಂದಿ ಸಾವು ಕಂಡಿದ್ದಾರೆ. ದುರಂತದಲ್ಲಿ 11 ಮಂದಿ ಗಾಯಗೊಂಡಿದ್ದು, 77 ಮಂದಿಯನ್ನು ರಕ್ಷಿಸಲಾಗಿದೆ. ಗಣಿಯೊಳಗೆ ಸಿಲುಕಿದವರು ಬದುಕಿರುವ ಸಾಧ್ಯತೆ ಕ್ಷೀಣವಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...