alex Certify
ಕನ್ನಡ ದುನಿಯಾ       Mobile App
       

Kannada Duniya

ಚೀನಾದಲ್ಲಿ ಭಾರೀ ಪ್ರವಾಹಕ್ಕೆ 25 ಬಲಿ

china-flash-floods

ಚೀನಾದಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ-ಪಶ್ಚಿಮ ಸಿಚುವಾನ್ ಪ್ರಾಂತ್ಯದ ಹಳ್ಳಿಯೊಂದು ಭಾರೀ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಮಳೆಯ ಅಬ್ಬರಕ್ಕೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೇರಿದೆ. ಅಂತ್ಯ ಸಂಸ್ಕಾರಕ್ಕಾಗಿ ವ್ಯವಸ್ಥೆ ಮಾಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋನ್ಗದಿ ಗ್ರಾಮದಲ್ಲಿ ಮಂಗಳವಾರ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಪ್ರವಾಹಕ್ಕೆ 71 ಮನೆಗಳು ಹಾನಿಗೊಳಗಾಗಿವೆ. 157 ಕುಟುಂಬದ 557 ಜನರಿಗೆ ಪ್ರವಾಹದ ಬಿಸಿ ತಟ್ಟಿದೆ. ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಳಗಾಗಿವೆ. ರಕ್ಷಣಾ ಕಾರ್ಯ ಮುಂದುವರೆದಿದ್ದು ನಾಪತ್ತೆಯಾಗಿರುವ ಜನರ ಪತ್ತೆ ಕಾರ್ಯ ಮುಂದುವರೆದಿದೆ.

ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. 200ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಜನರಿಗೆ ರಗ್ಗು, ಬಟ್ಟೆ, ಆಹಾರಗಳನ್ನು ಕಳುಹಿಸಲಾಗುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...