alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಯೋಧ

fire jawanದೇಶಕ್ಕಾಗಿ ತನ್ನ ಜೀವವನ್ನೇ ಮುಡುಪಾಗಿಟ್ಟಿದ್ದ ವೀರಯೋಧನೊಬ್ಬನಿಗೆ ಸಕಾಲದಲ್ಲಿ ನ್ಯಾಯ ಸಿಗದ ಕಾರಣ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೋಸ್ನಿಯಾದಲ್ಲಿ ನಡೆದಿದೆ. ಬೋಸ್ನಿಯಾದಲ್ಲಿರುವ ಕೋರ್ಟ್ ಆವರಣದಲ್ಲೇ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ 56 ವರ್ಷದ ಸೆನಾಡ್ ಬೇಗಿಕ್ ಅವರು ಆತ್ಮಹತ್ಯೆಗೆ ಯತ್ನಿಸಿದವರು. ಸಹೋದರನೊಂದಿಗೆ ಆಸ್ತಿ ವಿಚಾರವಾಗಿ ಜಗಳ ಮಾಡಿಕೊಂಡಿದ್ದ ಸೆನಾಡ್ ಬೇಗಿಕ್ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಸುದೀರ್ಘ 16 ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ಇನ್ನೂ ತೀರ್ಪು ಕೊಟ್ಟಿರಲಿಲ್ಲ. 16 ವರ್ಷ ಕಾದರೂ, ನ್ಯಾಯಾಲಯಕ್ಕೆ ಅಲೆದಾಡಿದರೂ ನ್ಯಾಯ ಸಿಗದ ಕಾರಣ ಅವರು ಬೇಸರದಿಂದ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನ್ಯಾಯಾಲಯದ ಎದುರು ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಅವರು ಒಂದು ವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದು, ಸ್ಪಂದನೆ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸ್ಥಳದಲ್ಲಿದ್ದ ಕೆಲವರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...