alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಾಲಯದಲ್ಲಿ ದೀಪಾವಳಿ ಆಚರಿಸಲಿದ್ದಾಳೆ ಟ್ರಂಪ್ ಪುತ್ರಿ

donald-and-ivanka-trumpಭಾರತದಲ್ಲಿ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಮಂದಿರ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ತೆರಳಿ ಮತದಾರರ ಮನವೊಲಿಕೆಗೆ ಮುಂದಾಗುವುದು ಸಾಮಾನ್ಯ. ಈಗ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಡೋನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಕೂಡಾ ದೇವಾಲಯಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ.

34 ವರ್ಷದ ಇವಾಂಕಾ ಟ್ರಂಪ್ ಯಶಸ್ವಿ ಮಹಿಳಾ ಉದ್ಯಮಿಯಾಗಿದ್ದು, ತಮ್ಮ ತಂದೆಯ ಚುನಾವಣೆಯಲ್ಲಿ ಸ್ಟಾರ್ ಕ್ಯಾಂಪೇನರ್ ಕೂಡಾ ಆಗಿದ್ದಾರೆ. ಇವಾಂಕಾ, ದೀಪಾವಳಿ ಸಂದರ್ಭದಲ್ಲಿ ವರ್ಜಿನಿಯಾದಲ್ಲಿರುವ ರಾಜಧಾನಿ ದೇವಾಲಯಕ್ಕೆ ಭೇಟಿ ನೀಡಿ ಭಾರತ ಮೂಲದ ಅಮೆರಿಕಾ ವಾಸಿಗಳೊಂದಿಗೆ ಹಬ್ಬ ಆಚರಿಸಲಿದ್ದಾರೆ.

ಅಮೆರಿಕಾದಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರುಗಳ ಮತ ಸೆಳೆಯಲು ಅಧ್ಯಕ್ಷೀಯ ಅಭ್ಯರ್ಥಿಗಳಾದ ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಮುಂದಾಗಿದ್ದಾರೆ. ಕಳೆದ ವಾರ, ಕಾಶ್ಮೀರಿ ಪಂಡಿತರು ಹಾಗೂ ಬಾಂಗ್ಲಾದೇಶದ ಹಿಂದೂಗಳಿಗೆ ನೆರವು ನೀಡಲು ದೇಣಿಗೆ ಸಂಗ್ರಹಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಂಪ್ ಪಾಲ್ಗೊಂಡಿದ್ದು ಗಮನಾರ್ಹ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...