alex Certify
ಕನ್ನಡ ದುನಿಯಾ       Mobile App
       

Kannada Duniya

ಕಟ್ಟಡದಡಿ ಸಿಲುಕಿರುವ 200 ಮಂದಿಯ ಜೀವನ್ಮರಣದ ಹೋರಾಟ

earth qyk

ತೈವಾನ್ ನಲ್ಲಿ ಪ್ರಬಲ ಭೂಕಂಪನ ಉಂಟಾಗಿ ಹಲವಾರು ಕಟ್ಟಡಗಳು ಧರೆಗೆ ಉರುಳಿವೆ. ಮೂವರು ಸಾವು ಕಂಡಿದ್ದು, ಘಟನೆಯಲ್ಲಿ 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ, ಸುಮಾರು 200 ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ದಕ್ಷಿಣ ತೈವಾನ್ ಪ್ರಾಂತ್ಯದ ತೈನಾನ್ ನಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ. ಈ ಘಟನೆಯಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. 17 ಅಂತಸ್ತಿನ ಕಟ್ಟಡ ಉರುಳಿಬಿದ್ದಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಅವರನ್ನು ಸೇನೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಭೂಕಂಪದಿಂದಾಗಿ ಭೂಮಿ ಗಡಗಡ ನಡುಗಿದ್ದು, ಕೆಲವರು ಮನೆಯಿಂದ ಹೊರಗೆ ಓಡಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಭೂಮಿ ನಡುಗಿ, ಕಟ್ಟಡಗಳು ಕುಸಿದಿವೆ. ಇದರಿಂದಾಗಿ ಮೂವರು ಸಾವು ಕಂಡಿದ್ದು, ಇನ್ನೂ ಹಲವರು ಸಾವಿಗೀಡಾಗಿರಬಹುದೆಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಭಾಗದಲ್ಲಿ ಕೆಲವು ವರ್ಷಗಳ ಹಿಂದೆ ಭೂಕಂಪದಿಂದ ಸಾವಿರಾರು ಮಂದಿ ಮೃತಪಟ್ಟಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...