alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ನಲ್ಲಿ ದಾಖಲೆ ಬರೆದ ದುಬೈ ದೊರೆ

sheikhmo_article

ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರು, ಸೆಲೆಬ್ರಿಟಿಗಳು ಅತಿಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುತ್ತಾರೆ. ಗಣ್ಯರ ಬಗ್ಗೆ ಕುತೂಹಲ ಸಹಜವಾಗಿಯೇ ಇರುತ್ತದೆ. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹೆಚ್ಚಾಗಿ ಗಮನಿಸುತ್ತಾರೆ. ಅಮೆರಿಕ ಅಧ್ಯಕ್ಷ ಒಬಾಮಾ ಟ್ವಿಟರ್ ನಲ್ಲಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಅದೇ ರೀತಿ ಫೇಸ್ ಬುಕ್ ನಲ್ಲಿ ದುಬೈ ದೊರೆ ಶೇಖ್ ಮೊಹಮ್ಮದ್ ಅತಿಹೆಚ್ಚು ಜನಪ್ರಿಯತೆ ಪಡೆದ ವ್ಯಕ್ತಿಯಾಗಿದ್ದಾರೆ. ಶೇಖ್ ಮೊಹಮ್ಮದ್ ಅವರು ಫೇಸ್ ಬುಕ್ ಗಲ್ಫ್ ಸಹಕಾರ ಒಕ್ಕೂಟದ ಪ್ರಮುಖರಲ್ಲಿಯೇ ಅತಿಹೆಚ್ಚು ಜನಪ್ರಿಯತೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಫೇಸ್ ಬುಕ್ ನಲ್ಲಿ 30 ಲಕ್ಷಕ್ಕೂ ಅಧಿಕ ಲೈಕ್ ಗಳು ಅವರಿಗೆ ಬಂದಿವೆ ಎಂದು ಅಧ್ಯಯನವೊಂದರಲ್ಲಿ ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ವಿಶ್ವದ ಪ್ರಮುಖರ ಹೆಸರಿನಲ್ಲಿ ಅಧ್ಯಯನ ಕೈಗೊಂಡು ಹೇಗೆಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ಸಂಹವನ ನಡೆಸಲಾಗುತ್ತದೆ ಎಂಬುದನ್ನು ಪರಿಗಣಿಸದದಲಾಗಿದೆ.

ಇದರಲ್ಲಿ ಕಂಡು ಬಂದ ಮಾಹಿತಿಯಂತೆ ದುಬೈ ದೊರೆ ಶೇಖ್ ಮೊಹಮ್ಮದ್ ಅವರು ಫೇಸ್ ಬುಕ್ ನಲ್ಲಿ 30 ಲಕ್ಷಕ್ಕೂ ಅಧಿಕ ಲೈಕ್ ಗಳನ್ನು ಪಡೆದುಕೊಂಡಿದ್ದಾರೆ. ಟ್ವಿಟರ್, ಗೂಗಲ್ ಪ್ಲಸ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಅವರಿಗೆ 11 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಗಳಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...